ದೇವರಹಿಪ್ಪರಗಿ: ಇದೇ ದಿ:೧೩ ರಂದು ಶನಿವಾರ ಹಸಿರುಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಸ್ಮರಣಾರ್ಥ ಬೆಂಗಳೂರಿನಲ್ಲಿ ಭವನ ಮತ್ತು ಸಂಶೋಧನೆ, ತರಬೇತಿ ಕೇಂದ್ರ ಉದ್ಘಾಟನೆಗೊಳ್ಳಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಾಯಿಕುಮಾರ ಬಿಸನಾಳ ತಿಳಿಸಿದ್ದಾರೆ.
ಪಟ್ಟಣದಲ್ಲಿ ಗುರುವಾರ ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿ, ಶೋಷಿತರ ಬಾಳಿನಲ್ಲಿ ಬೆಳಕು ಹರಿಸಿದ ಮುತ್ಸದ್ದಿ ಬಾಬು ಜಗಜೀವನರಾಮ್ ಸ್ಮರಣಾರ್ಥ ನಿರ್ಮಿಸಲಾಗಿರುವ ಭವನದ ಉದ್ಘಾಟನೆ ಬೆಂಗಳೂರಿನ ಮಾಗಡಿ ರಸ್ತೆಯ ಸುಮನಹಳ್ಳಿ ಸರ್ಕಲ್‌ನಲ್ಲಿಯ ನಿರಾಶ್ರೀತರ ಪರಿಹಾರ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಮಧ್ಯಾನ್ಹ ೩ ಗಂಟೆಗೆ ನೆರವೇರಲಿದೆ. ಈ ಸಂದರ್ಭದಲ್ಲಿ ಲೋಕಸಭೆಯ ಮಾಜಿ ಸ್ಪೀಕರ್ ಮೀರಾಕುಮಾರ, ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಭಾಗವಹಿಸಲು ಅನುಕೂಲವಾಗುವಂತೆ ಸಮಾಜಕಲ್ಯಾಣ ಇಲಾಖೆಯಿಂದ ೨ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ೧೦ ಜನರಿಗೆ ಭಾಗವಹಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕಾಂಗ್ರೆಸ್ ಮುಖಂಡ ಸುಭಾಸ್ ಯಡಹಳ್ಳಿ, ರಮೇಶ ಗುಬ್ಬೇವಾಡ, ಸಂಜು ಕಲ್ಯಾಣಿ, ಸದಾಶಿವ ಪೂಜಾರಿ, ವಿಠ್ಠಲ್ ಸಂದಿಮನಿ, ಧರ್ಮು ಹೊಸೂರ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

