ಸಿಂದಗಿ: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ನಡೆಸಿಕೊಡುವ ವಚನ ಕಮ್ಮಟ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಿಂದಗಿಯ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ನಿಂಗನಗೌಡ ಕರ್ನಾಳ ಹಾಗೂ ಮಾರ್ಗದರ್ಶಕರಾದ ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ಅವರಿಗೆ ಮಹಾವಿದ್ಯಾಲಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾರ್ಥಿಯ ಈ ಸಾಧನೆಗೆ ಮತ್ತು ಮಾರ್ಗದರ್ಶನ ನೀಡಿದ ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ಅವರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಅಶೋಕ ಮನಗೂಳಿ, ಸಂಸ್ಥೆಯ ನಿರ್ದೇಶಕ ಮಂಡಳಿ, ಮಹಾವಿದ್ಯಾಲಯ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ವೇಳೆ ಉಪನ್ಯಾಸಕರಾದ ಸಿದ್ದಲಿಂಗ ಕಿಣಗಿ, ಸತೀಶ ಬಸರಕೋಡ, ಎಫ್.ಎ.ಹಾಲಪ್ಪನವರ, ಡಾ.ಶಾಂತುಲಾಲ ಚವ್ಹಾಣ, ಆರ್.ವಾಯ್.ಪರೀಟ, ಬಿ.ಎಸ್.ಬಿರಾದಾರ, ಆರ್.ಬಿ.ಹೊಸಮನಿ, ಎಸ್.ಪಿ.ಬಿರಾದಾರ, ಎಮ್.ಎನ್.ಅಜ್ಜಪ್ಪ ಸೇರಿದಂತೆ ಅನೇಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

