Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ ಸೇವೆ ನಿರಂತರ ನೀಡುವುದು ಆರೋಗ್ಯ ಇಲಾಖೆ ಕರ್ತವ್ಯ
(ರಾಜ್ಯ ) ಜಿಲ್ಲೆ

ಆರೋಗ್ಯ ಸೇವೆ ನಿರಂತರ ನೀಡುವುದು ಆರೋಗ್ಯ ಇಲಾಖೆ ಕರ್ತವ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ಜೆ.ಹೆಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ

ಸಿಂದಗಿ: ಸಂತಾನೋತ್ಪತ್ತಿ ಆರೋಗ್ಯ ಸೇವೆಗಳನ್ನು ಅರ್ಹ ಫಲಾನುಭವಿಗಳಿಗೆ ನಿರಂತರವಾಗಿ ನೀಡುವುದು ಇಲಾಖೆಯ ಆದ್ಯ ಕರ್ತವ್ಯ ಎಂದು ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಹೇಳಿದರು.
ಪಟ್ಟಣದ ಜೆ.ಹೆಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಂದಗಿ ತಾಲೂಕ ಆರೋಗ್ಯ ಇಲಾಖೆ ಹಾಗೂ ಜೆ.ಹೆಚ್.ಪಟೇಲ್ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡ ವಿಶ್ವ ಜನಸಂಖ್ಯೆ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯ ಕುಟುಂಬ ಕಲ್ಯಾಣ ಯೋಜನೆಯಲ್ಲಿ ತಾತ್ಕಾಲಿಕ ವಿಧಾನಗಳಾದ ಗರ್ಭ ನಿರೋಧಕ ಮಾತ್ರೆಗಳ ಸೇವನೆ, ವಂಕಿಧಾರಣೆ, ನಿರೋಧ ಬಳಕೆಯಿಂದ ಬೇಗನೆ ಗರ್ಭಧರಿಸುವದನ್ನು ತಡೆಯಬಹುದು. ಒಂದು ಮತ್ತು ಎರಡನೇಯ ಮಗುವಿನ ಅಂತರ ಕಾಪಾಡಬಹುದು. ಶಾಶ್ವತ ವಿಧಾನಗಳಾದ ಉದರ ದರ್ಶಕ ಹಾಗೂ ಉದರ ಛೇದಕ ಶಸ್ತ್ರಚಿಕಿತ್ಸೆ, ಮತ್ತು ಪುರುಷರಿಗಾಗಿ ನೋಸ್ಕಾಲ್‌ಪೆಲ್ ವ್ಯಾಸಕ್ಟಮಿ ಶಸ್ತ್ರ ಚಿಕಿತ್ಸೆಯಿಂದ ಸಂತಾನ ನಿಯಂತ್ರಿಸಬಹುದು ಎಂದರು.
ಈ ವೇಳೆ ಪ್ರಾಚಾರ್ಯ ಡಾ.ಬಿ.ಎಮ್.ಹುರಕಡ್ಲಿ ಮಾತನಾಡಿ, ಆರೋಗ್ಯ ಇಲಾಖೆ ಕುಟುಂಬ ಕಲ್ಯಾಣದ ತಾತ್ಕಾಲಿಕ ಮತ್ತು ಶಾಶ್ವತ ಯೋಜನೆಗಳನ್ನು ಅಳವಡಿಸುವುದರ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಬಹುದು. ಈ ಯೋಜನೆಗಳ ಮಹತ್ವವನ್ನು ಸಮುದಾಯದಲ್ಲಿ ಅರಿವು ಮೂಡಿಸಬೇಕು. ಜನಸಂಖ್ಯೆ ಸ್ಪೋಟದಿಂದ ಅನೇಕ ಸಮಸ್ಯೆಗಳು ಉದ್ಭವಿಸಿವೆ. ಮೂಲಭೂತ ಸೌಕರ್ಯಗಳ ಸಮಸ್ಯೆ, ವಸತಿ ಸಮಸ್ಯೆ, ಸಾರಿಗೆ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳು ಉಂಟಾಗಿವೆ. ಮುಂದಿನ ಭಾವಿ ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳು ಸಮುದಾಯದಲ್ಲಿ ಜನಸಂಖ್ಯೆ ನಿಯಂತ್ರಣ ಹಾಗೂ ಜನಸಂಖ್ಯೆ ಹೆಚ್ಚಳದಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು ಸಲಹೆ ನೀಡಿದರು.
ಈ ವೇಳೆ ವೈದ್ಯಾಧಿಕಾರಿ ಡಾ.ಎ.ಎ.ಮಾಗಿ, ಸಿ.ಎಂ. ಮನಗೂಳಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ, ಡಾ.ಮಹಾಂತೇಶ ಹಿರೇಮಠ ಮಾತನಾಡಿದರು. ಕಾಲೇಜಿನ ಪ್ರಶಿಕ್ಷಣಾರ್ಥಿಗಳಾದ ಅಕ್ಷತಾ ಒಕ್ಕಲಿ, ಸದ್ದಾಂ ಪುರದಾಳ ಜನಸಂಖ್ಯೆ ಸ್ಪೋಟದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್.ಎ.ಜಾಹಗೀರದಾರ, ಅಂಬರೀಷ್ ಬಿರಾದಾರ, ಬಿ.ಡಿಮಾಸ್ತಿ, ಪ್ರದೀಪ ಕತ್ತಿ, ಆರೋಗ್ಯ ಇಲಾಖೆಯ ಪ್ರಭು ಜಂಗಿನಮಠ, ಮಹಾಲಿಂಗ ಫಕೀರಪೂರ, ವೀರೇಂದ್ರ ಪವಾಡೆ, ಹೇಮಂತ ಕಲಾಲ, ಸಾಯಬಣ್ಣ ಗಣಜಲಿ, ಗೀತಾ ಸಾಸಬಾಳ ಸೇರಿದಂತೆ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.