ವಿಜಯಪುರ: ಜಿಲ್ಲೆಯಲ್ಲಿ ಸೊಳ್ಳೆಗಳ ಅಬ್ಬರದಿಂದ ಡೆಂಗ್ಯೂ ನಿಯಂತ್ರಣ ಹಾಗೂ ಶುದ್ಧ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಕೆ.ಆರ್.ಎಸ್. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಸೊಳ್ಳೆಗಳ ಅಬ್ಬರ ಹೆಚ್ಚಾಗಿದ್ದು, ಹಾಗೂ ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿದ್ದು, ರಾಸಾಯನಿಕ ಗೊಬ್ಬರಗಳಿಂದ ದೋಷಿತ ನೀರು ಸರಬರಾಜು ಆಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಹಾಗೂ ಇತರ ಹಲವಾರು ರೋಗಗಳು ಉಂಟಾಗುತ್ತಿವೆ. ಜಿಲ್ಲೆಯಲ್ಲಿ ಮತ್ತು ವಿಜಯಪುರ ನಗರದಲ್ಲಿ ಸೊಳ್ಳೆಗಳ ಮೇಲೆ ಕೀಟನಾಶಕ ಔಷಧಗಳನ್ನು ಸಿಂಪರಣೆ ಮಾಡುವಂತಾಗಬೇಕು. ಇನ್ನು ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಅಗತ್ಯವಾದ ಸೂಚನೆ ಮತ್ತು ಆರೋಗ್ಯಕ್ಕೆ ಬೇಕಾಗುವ ತುರ್ತು ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ತುರ್ತು ಸಭೆ ಕರೆದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೂ ಮತ್ತು ಜಿಲ್ಲೆಯಲ್ಲಿ ಏಕಕಾಲದಲ್ಲಿ ೪೦ ಕೀಟನಾಶಕಗಳ ಕೆಟ್ಟಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷತನ ಮೂಲ ಕಾರಣವಾಗಿದೆ ಇದಕ್ಕೆ ಕಾರಣರಾದ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸು ಜಿಲ್ಲೆಯಲ್ಲಿ ಡೆಂಗ್ಯೂ ಹರಡದಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆ.ಆರ್.ಎಸ್. ಪಕ್ಷದ ನಗರ ಅಧ್ಯಕ್ಷರಾದ ಅಬ್ದುಲ್ ಹಮೀದ ಎಸ್. ಇನಾಮದಾರ, ವಿಕ್ರಮ ವಾಘಮೋರೆ, ದುರ್ಗಪ್ಪ ಬೂದಿಹಾಳ, ಶಾಂತುಗೌಡ ಬೇಡೆವಾಡ ಇದ್ದರು.
Subscribe to Updates
Get the latest creative news from FooBar about art, design and business.
ಡೆಂಗ್ಯೂ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಕೆ.ಆರ್.ಎಸ್. ಪಕ್ಷ ಆಗ್ರಹ
Related Posts
Add A Comment

