ಮುದ್ದೇಬಿಹಾಳ: ಕಳೆದ ಕೆಲವು ದಿನಗಳ ಹಿಂದೆ ಪಟ್ಟಣದ ಹುಡ್ಕೋ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿದ್ದ ಹಣವನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಲ್ಲಿನ ಹುಡ್ಕೋದಲ್ಲಿರುವ ಕರ್ನಾಟಕ ಬ್ಯಾಂಕ್ ನಿಂದ ೩.೬೦ ಲಕ್ಷ ಹಣವನ್ನು ಡ್ರಾ ಮಾಡಿಕೊಂಡು ಬೈಕ್ ನ ಹಿಂಬದಿ ಬ್ಯಾಗನಲ್ಲಿಟ್ಟು ಹುಡ್ಕೋ ಗೇಟ್ ಬಳಿ ಎಳೆನೀರು ಖರೀದಿಸುವಷ್ಟರಲ್ಲಿ ಖದೀಮರು ಹಣವನ್ನು ಎಗರಿಸಿದ್ದರು. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಶಂಕರ ಆಚಾರ್ಯ ಮತ್ತು ಸಂಜು ಹೊಸಮನಿ ಆರೋಪಿತರಿದ್ದು ಇವರಿಂದ ಮುದ್ದೇಬಿಹಾಳ, ನಿಡಗುಂದಿ, ತಾಳಿಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ಪೈಕಿ ಒಟ್ಟು ೩.೫ ಲಕ್ಷ ರೂ ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ಡಿವಾಯ್‌ಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಂ ಪಿಎಸ್‌ಐ ಆರ್.ಎಲ್.ಮನ್ನಾಬಾಯಿ, ಸಿಬ್ಬಂದಿಗಳಾದ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ, ವಿ.ಎನ್.ಹಾಲಗಂಗಾಧರಮಠ, ಆರ್.ಎಸ್.ಮದರಿ, ಎಸ್.ಎಲ್.ಹತ್ತರಕಿಹಾಳ, ಎಸ್.ಸಿ.ರೆಡ್ಡಿ ಇವರನ್ನ ಶ್ಲಾಘಿಸಿದ ಎಸ್‌ಪಿ ಪ್ರಶಂಸನಾ ಪತ್ರದೊಂದಿಗೆ ನಗದು ಬಹುಮಾನವನ್ನು ಘೋಷಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

