Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಸುಂದರವಾಗಿಸಲು ಕ್ರಮಕ್ಕೆ ಡಿಸಿ ಟಿ.ಭೂಬಾಲನ್ ಸೂಚನೆ
(ರಾಜ್ಯ ) ಜಿಲ್ಲೆ

ವಿಜಯಪುರ ಸುಂದರವಾಗಿಸಲು ಕ್ರಮಕ್ಕೆ ಡಿಸಿ ಟಿ.ಭೂಬಾಲನ್ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್, ಪಾಲಿಕೆಯ ಸದಸ್ಯರು & ಆಯುಕ್ತರೊಂದಿಗೆ ವಿವಿಧೆಡೆ ಭೇಟಿ ನೀಡಿದ ಡಿಸಿ

ವಿಜಯಪುರ: ಸ್ವಚ್ಛ, ಸುಂದರ ನಗರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿನ ಸ್ವಚ್ಛತೆ ಕಾಪಾಡಿಕೊಳ್ಳುವುದು, ಬೀದಿ ಬದಿ ವ್ಯಾಪಾರಸ್ಥರಿಗೆ ವಿವಿಧೆಡೆ ವ್ಯಾಪಾರ ವಲಯ ಸ್ಥಾಪಿಸಿ ಅನುಕೂಲ ಕಲ್ಪಿಸುವುದು, ಸುವ್ಯವಸ್ಥಿತ ವಾಹನಗಳ ನಿಲುಗಡೆ ವ್ಯವಸ್ಥೆ ಕೈಗೊಂಡು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಮಹೇಜಬಿನ್ ಹೊರ್ತಿ, ಉಪ ಮಹಾಪೌರ ದಿನೇಶ ಹಳ್ಳಿ, ಪಾಲಿಕೆಯ ವಿವಿಧ ಸದಸ್ಯರು ಹಾಗೂ ಪಾಲಿಕೆ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಶುಕ್ರವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಸೂಚನೆ ನೀಡಿದರು.
ಬೆಳಿಗ್ಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಕಣಕಿ ಬಜಾರ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಐತಿಹಾಸಿಕ ಕೋಟೆ ಗೋಡೆ ಪಕ್ಕದಲ್ಲಿ ಬೆಳೆದಿರುವ ಮುಳ್ಳಿನ ಕಂಟಿಗಳನ್ನು ತೆರವುಗೊಳಿಸುವುದು, ಸದರಿ ಪ್ರದೇಶದಲ್ಲಿ ಸ್ವಚ್ಛತೆ ಕೈಗೊಂಡು ಈ ಪ್ರದೇಶದಲ್ಲಿ ವ್ಯಾಪಾರಸ್ಥರ ಅನುಕೂಲಕ್ಕಾಗಿ ನಗರ ವ್ಯಾಪಾರ ವಲಯವನ್ನಾಗಿ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಲಲಿತ ಮಹಲ ಹತ್ತಿರದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪಾಲಿಕೆಗೆ ಸಂಬಂಧಿಸಿದ ಜಾಗವನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕು. ನಗರದ ಗಗನ ಮಹಲ್ ಹತ್ತಿರದ ಕಂದಕದಲ್ಲಿನ ತ್ಯಾಜ್ಯವನ್ನು ಸ್ವಚ್ಛಗೊಳಿಸಿ, ಕಂದಕದ ಸುತ್ತಮುತ್ತ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ನಗರದ ನವಬಾಗ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಮುಖ್ಯ ರಸ್ತೆ ಕಾಮಗಾರಿಯನ್ನು ಕೈಗೊಂಡು ಅಭಿವೃದ್ದಿಪಡಿಸಲು ರಸ್ತೆಯಲ್ಲಿರುವ ವಿದ್ಯುತ್ ಕಂಬಗಳು ಹಾಗೂ ನೀರು ಸರಬರಾಜು ಪೈಪಲೈನ್‌ಗಳ ಸ್ಥಳಾಂತರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಐತಿಹಾಸಿಕ ತಾಜಬಾವಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬಾವಡಿಯ ಸುತ್ತಮುಲಿನ ಪ್ರದೇಶದಲ್ಲಿ ಅತಿಕ್ರಮಣ ತೆರವುಗೊಳಿಸಿ, ನಗರದ ಬುರಣಾಪುರ ಪ್ರದೇಶದಲ್ಲಿರುವ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ನಿರ್ಮಿಸಲಾದ ಮನೆಗಳಿಗೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವಂತೆ ಹಾಗೂ ನಗರದ ಸೋಲಾಪುರ ರಸ್ತೆಯ ಅಗಲೀಕರಣ ಕಾರ್ಯ ಕೈಗೊಳ್ಳುವುದರಿಂದ ಕೂಡಲೇ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ನಗರದ ಎಸ್.ಎಸ್.ರಸ್ತೆ ಹಾಗೂ ನೆಹರು ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಐತಿಹಾಸಿಕ ನಗರವಾಗಿರುವುದರಿಂದ ನಗರದ ಸೌಂದರೀಕರಣಕ್ಕೆ ಸ್ಮಾರಕಗಳು ಹಾಗೂ ಸ್ಮಾರಕಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜೊತೆಗೆ ವಿವಿಧ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಪಾರ ವಲಯಗಳನ್ನು ಸ್ಥಾಪಿಸುವುದು, ಮಾರುಕಟ್ಟೆಯಲ್ಲಿನ ಸಂಚಾರ ನಿಯಂತ್ರಣಕ್ಕಾಗಿ ನಗರದ ಮುಖ್ಯ ಮಾರ್ಕೆಟ್ ಪ್ರದೇಶದಲ್ಲಿ ವಾಹನಗಳ ನಿಲುಗಡೆ ಪ್ರದೇಶಗಳನ್ನು ಗುರುತಿಸಿ ವಾಹನ ನಿಲುಗಡೆ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಅವರು ಸೂಚನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.