ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಇದೇ ಜುಲೈ ೨೧ ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣುರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಹಡಪದ ಅಪ್ಪಣ್ಣ ಜಯಂತಿ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅಂದು ಬೆಳಗ್ಗೆ ೯.೩೦ ಕೆಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿವೃತ್ತ ಮಾರ್ಗವಾಗಿ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ವರೆಗೆ ಹಡಪದ ಅಪ್ಪಣ್ಣ ಭಾವಚಿತ್ರ ಮೆರವಣಿಗೆ ಮಾಡಲಾಗುವುದು.
ಈ ವೇಳೆ ವಿವಿಧ ವಾದ್ಯಮೇಳಗಳ ಪಾಲ್ಗೊಳ್ಳಲಿವೆ. ಬೆಳಗ್ಗೆ ೧೧ ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

