ವಿಜಯಪುರ: ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನೂತನ ವಸತಿ ನಿಲಯ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ ರವರಿಗೆ ದಲಿತ ವಿದ್ಯಾರ್ಥಿ ಪರಿಷತ್ ಮೂಲಕ ಮನವಿ ಮಾಡಲಾಯಿತು.
ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಅಜಮನಿಯವರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ರಾಜ್ಯದ ನಾನಾ ಭಾಗಗಳಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಆಗಮಿಸುತ್ತಾರೆ.
ಈ ಬಾರಿ ಹೆಚ್ಚಿನ ವಿದ್ಯಾರ್ಥಿನಿಯರು ಕೋರ್ಸ್ಗಳಿಗೆ ಪ್ರವೇಶ ಪಡೆದುಕೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ನಲ್ಲಿ ಈಗಿರುವ ವಸತಿ ನಿಲಯಗಳಲ್ಲಿ ಅವಕಾಶ ಸಿಗದೇ ಹೊರಗಡೆ ರೂಮ್ ಮಾಡಿಕೊಂಡು ಓದಬಹುದು ಕಷ್ಟದ ಸಂಗತಿ ಆಗಿದೆ, ಅದರಲ್ಲೂ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್ ಗಳಿಲ್ಲದೆ ಕ್ಲಾಸ್ ಗಳನ್ನು ತಪ್ಪಿಸುವ ಸಂಭವ ಉಂಟಾಗಿದೆ ಪ್ರತಿದಿನ ಕಾಲೇಜಿನಿಂದ ರೂಮಿಗೆ ರೂಮಿನಿಂದ ಕಾಲೇಜಿಗೆ ಓಡಾಡುವದರಿಂದ ವಿದ್ಯಾಭ್ಯಾಸದಲ್ಲಿ ಕುಂಠಿತವಾಗುತ್ತಿದೆ.
ಅದಕ್ಕಾಗಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಹಿತ ದೃಷ್ಟಿಯಯಿಂದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಲ್ಲಿವರೆಗೆ ಒಂದು ವಸತಿ ನಿಲಯವು ಇಲ್ಲದೆ ಇರುಹುದು ದುರಾದೃಷ್ಟದ ಸಂಗತಿಯಾಗಿದೆ. ವಿಶ್ವ ವಿದ್ಯಾಲಯದ ಕ್ಯಾಂಪಸ್ ಒಳಗಡೆ ವಸತಿ ನಿಲಯ ಸ್ಥಾಪಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾದೇಶ ಚಲವಾದಿ, ಯುವರಾಜ್ ಓಲೇಕಾರ್, ಯಾಷಿನ್ ಇಂಮಾದಾರ್, ಸಂದೇಶ್ ಕುಮುಟಗಿ, ರವಿ ವಾಲಿಕಾರ, ಪ್ರವೀಣ ಬನಸೋಡೆ, ಮಾಂತೇಶ, ಯುವರಾಜ್, ಮುಂತಾದವರು ಭಾಗಿಯಾಗಿದ್ದರು.
Subscribe to Updates
Get the latest creative news from FooBar about art, design and business.
ಅಕ್ಕಮಹಾದೇವಿ ವಿವಿ ಕ್ಯಾಂಪಸ್‌ನಲ್ಲಿ ವಸತಿ ನಿಲಯ ಪ್ರಾರಂಭಿಸಲು ದವಿಪ ಆಗ್ರಹ
Related Posts
Add A Comment

