Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶ ಮುನ್ನಡೆ ಸಾಧಿಸಲು ಮಕ್ಕಳಲ್ಲಿ ಚುನಾವಣೆ ಪರಿಕಲ್ಪನೆ ಅಗತ್ಯ :ಶಿಂಧೆ
(ರಾಜ್ಯ ) ಜಿಲ್ಲೆ

ದೇಶ ಮುನ್ನಡೆ ಸಾಧಿಸಲು ಮಕ್ಕಳಲ್ಲಿ ಚುನಾವಣೆ ಪರಿಕಲ್ಪನೆ ಅಗತ್ಯ :ಶಿಂಧೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಂಜಾರಾ ಪ್ರೌಢ ಶಾಲೆಯಲ್ಲಿ ಚುನಾವಣಾ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ

ವಿಜಯಪುರ: ಭಾರತದ ಭಾವಿ ಮತದಾರ ಆಗಲಿರುವ ಫ್ರೌಢ ಶಾಲಾ ಮಕ್ಕಳು ನಮ್ಮ ಚುನಾವಣಾ ಮಾದರಿ ಅನುಸರಿಸಲಾಗಿದೆ. ಚುನಾವಣೆಯಲ್ಲಿ ಒಬ್ಬ ವ್ಯಕ್ತಿಯನ್ನು ಆಯ್ಕೆ ಮಾಡುವುದರಲ್ಲಿ ಮತದಾರರ ಜವಾಬ್ದಾರಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದಾಗಿದೆ ಎಂದು ಶಾಲಾ ಚುನಾವಣಾ ಅಧಿಕಾರಿಗಳಾದ ಎಸ್.ಕೆ.ಸಿಂಧೆಯವರು ಹೇಳಿದರು.
ಶುಕ್ರವಾರದಂದು ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆಯಲ್ಲಿ ಚುನಾವಣಾ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ ಜರುಗಿತು. ನಾಮಪತ್ರ ಸಲ್ಲಿಕೆ, ಚಿಹ್ನೆ ನೀಡುವಿಕೆ, ಬ್ಯಾಲೇಟ್ ಪೇಪರ್, ಚುನಾವಣಾ ಪ್ರಚಾರ, ಸಿಬ್ಬಂದಿಗಳ ನೇಮಕ, ಮತ ಹಾಕಿದ ವಿದ್ಯಾರ್ಥಿಗಳಿಗೆ ಶಾಹಿ ಬಳಕೆ, ಏಜೆಂಟರ ನೇಮಕ ಮಾಡುವ ಮೂಲಕ ಚುನಾವಣಾ ಮಾದರಿಯಲ್ಲಿಯೇ ಶಾಲಾ ಸಂಸತ್ತು ಚುನಾವಣೆ ಯಶಸ್ವಿಯಾಗಿ ನೆರವಾಯಿತು. ಈ ವೇಳೆ ೪೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತದಾನ ಮಾಡಿ ತಮ್ಮ ನಾಯಕರನ್ನು ಆರಿಸಿದರು.
ಈ ವೇಳೆಯಲ್ಲಿ ಮಾತನಾಡಿದ ಅವರು. ಚುನಾವಣೆಯಲ್ಲಿ ಆಸಕ್ತಿ ಮತ್ತು ನಾಯಕತ್ವದ ಗುಣ ಬೆಳೆಸುವ ಭಾಗವಾಗಿ ಈ ಚುನಾವಣೆ ಪ್ರಕ್ರಿಯೆ ನಡೆಸಲಾಗಿದೆ. ಮಕ್ಕಳು ಪ್ರಜಾಪ್ರಭುತ್ವದ ಆಶಯ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಇ.ಡಿ.ಲಮಾಣಿ ಮತಪೆಟ್ಟಿಗೆಗಳನ್ನು ತೆರೆದು ಮತ ಏಣಿಕೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜ ಹಾಗೂ ದೇಶ ಮುನ್ನಡೆ ಸಾಧಿಸಬೇಕಾದರೆ ಮಕ್ಕಳಲ್ಲಿ ಚುನಾವಣೆಯ ಪರಿಕಲ್ಪನೆ ಕುರಿತು ಸ್ಪಷ್ಟತೆ ಬರಬೇಕು. ಜತೆಗೆ ಮೂಲಭೂತ ಹಕ್ಕುಗಳ ಬಗ್ಗೆ ಅರಿತು ಮೂಡಿಸಬೇಕು. ಶಾಲಾ ಮಕ್ಕಳಲ್ಲಿ ನಾಗರೀಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ ಎಂಬುದನ್ನು ಮನಗಾಣಿಸುವುದೇ ಶಾಲಾ ಸಂಸತ್ತು ಕಾರ್ಯಕ್ರಮದ ಮೂಲ ಧ್ಯೇಯ ಎಂದರು.
ಸಾಮಾನ್ಯ ಚುನಾವಣೆಗಳಂತೆಯೇ ಶಾಲೆಯಲ್ಲೂ ವಿದ್ಯಾರ್ಥಿಗಳು ಆಧಾರ ಕಾರ್ಡ್ಗಳನ್ನು ಗುರುತಿನ ಚೀಟಿಗಳಂತೆ ಪರಿಶೀಲಿಸಿ ತೋರ್ಬೆರಳಿಗೆ ಸಾಮಾನ್ಯ ಇಂಕಿನ ಶಾಹಿಯನ್ನು ಹಚ್ಚಲಾಗುತ್ತಿತ್ತು. ಸರತಿ ಸಾಲಿನಲ್ಲಿ ನಿಂತಿದ್ದ ಮಕ್ಕಳು, ಶಿಸ್ತಿನಿಂದ ಒಬ್ಬೊಬ್ಬರಾಗಿ ಬಂದು ಮತ ಚಲಾಯಿಸುತ್ತಿದ್ದುದು ವಿಶೇಷವಾಗಿತ್ತು.
ಪ್ರಧಾನ ಕಾರ್ಯದರ್ಶಿಗಳಾಗಿ ಮಾಂತೇಶ ಕಿತ್ಲಿ, ಸಭಾಪತಿಯಾಗಿ ಸುಶ್ಮೀತಾ ಚವ್ಹಾಣ್, ಮಹಿಳಾ ಪ್ರತಿನಿಧಿಯಾಗಿ ಮಾಧುರಿ ರಾಠೋಡ ಹಾಗೂ ತರಗತಿ ಪ್ರತಿನಿಧಿಗಳಾಗಿ ೮ ನೆಯ ತರಗತಿಯ ‘ಎ’ ವಿಭಾಗದ ಕಸ್ತೂರಿ ಬಾಳಿಕಾರ, ‘ಬಿ’ ರಾಜಕುಮಾರ ಭಜಂತ್ರಿ, ‘ಸಿ’ ವಿಭಾಗದ ಕರಣ ಪವಾರ, ೯ ನೆಯ ತರಗತಿಯ ‘ಎ’ ವಿಭಾಗದ ಸ್ನೇಹಾ ಬಗಲಿ, ‘ಬಿ’ ವಿಭಾಗದ ಅಮೂಲ ಚವ್ಹಾಣ್, ‘ಸಿ’ ವಿಭಾಗದ ಶ್ರೀಪಾದ ಹಿರೇಮಠ, ೧೦ ನೆಯ ತರಗತಿಯ ‘ಎ’ ವಿಭಾಗದ ಸಾಕ್ಷಿ ಗಾಯಕ್ವಾಡ, ‘ಬಿ’ ವಿಭಾಗದ ಸಂಗಮೇಶ ಮುಳವಾಡ ಹಾಗೂ ‘ಸಿ’ ವಿಭಾಗದ ಕಿರಣ ರಾಠೋಡರವರುಗಳು ಆಯ್ಕೆ ಯಾಗಿದ್ದಾರೆ. ಈ ವೇಳೆಯಲ್ಲಿ ಎಲ್ಲ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.