Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೮ರಂದು ಪತ್ರಿಕಾ ದಿನಾಚರಣೆಗೆ ಕಾನಿಪ ನಿರ್ಧಾರ
(ರಾಜ್ಯ ) ಜಿಲ್ಲೆ

ಜು.೨೮ರಂದು ಪತ್ರಿಕಾ ದಿನಾಚರಣೆಗೆ ಕಾನಿಪ ನಿರ್ಧಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ | ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು. ೨೮ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನ ಎದುರಿಗಿರುವ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ.
ಬೃಹತ್ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು.
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುವರು.
ಈ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಗೂ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಆಗಮಿಸುವರು.
ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಸಿ.ಎಸ್. ನಾಡಗೌಡ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಪಾಲಿಕೆ ಮೇಯರ್ ಮಹೆಜಬೀನ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಆಗಮಿಸುವರು.
ವಚನಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಸ್. ಮದಭಾವಿ ಪತ್ರಿಕಾ ಕ್ಷೇತ್ರಕ್ಕೆ ವಚನಪಿತಾಮಹ ಡಾ. ಫ.ಗು. ಹಳಕಟ್ಟಿ ಕೊಡುಗೆ ಕುರಿತು ಉಪನ್ಯಾಸ ನೀಡುವರು.
ಅತಿಥಿಗಳಾಗಿ ಜಿಲ್ಲಾಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಭಗವಾನ್, ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ ಹಾಗೂ ಚಾಣಕ್ಯ ಕರಿಯರ್ ಅಕಾಡೆಮಿ ಮುಖ್ಯಸ್ಥ ಎನ್.ಎಂ. ಬಿರಾದಾರ ಆಗಮಿಸುವರು.
ಸಂಘದ ಜಿಲ್ಲಾ, ತಾಲೂಕು ಘಟಕದ ಪದಾಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.