ವಿಜಯಪುರ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಮದ ಎಂ.ಟಿ.ಎಸ್. ಮತ್ತು ಹವಾಲ್ದಾರ ಪರೀಕ್ಷೆ ೨೦೨೪ರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಕರೆಯಲಾಗಿದ್ದು, ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೇಶದಾದ್ಯಂತ ನಡೆಸಲಾಗುತ್ತಿದೆ.
ಆಸಕ್ತ ಜಿಲ್ಲೆಯ ವಿದ್ಯಾವಂತ ೧೦ನೇ ಅಥವಾ ತತ್ಸಮಾನ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನರು ಮತ್ತು ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ : ೩೧-೭-೨೦೨೪ ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗ (SSC) website: www.ssc.kkr.nic.in & https:ssc.gov.in ನ್ನು ಅಥವಾ ದೂ: ೦೮೦-೨೫೫೦೨೫೨೦ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೊಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
