Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಧಿಸುವ ಛಲವಿದ್ದರೆ ಮಾತ್ರ ಸಾಧನೆ ಸಾಧ್ಯ :ಡಾ.ಹಿರೇಮಠ
(ರಾಜ್ಯ ) ಜಿಲ್ಲೆ

ಸಾಧಿಸುವ ಛಲವಿದ್ದರೆ ಮಾತ್ರ ಸಾಧನೆ ಸಾಧ್ಯ :ಡಾ.ಹಿರೇಮಠ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಬಹುತೇಕ ಗ್ರಾಮೀಣ ಭಾಗದಿಂದ ಬಂದವರೇ ಬದುಕಿನಲ್ಲಿ ಸಾಧನೆ ಮಾಡಿರುವದನ್ನು ಕಾಣುತ್ತೇವೆ. ಬದುಕಿನಲ್ಲಿ ಸಾಧಿಸುವ ಛಲ ಒಂದಿದ್ದರೆ ಖಂಡಿತ ಬದುಕಿನಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳನ್ನು ಎದುರಿಸಿ ಒಂದಿಲ್ಲೊಂದು ಸಾಧನೆ ಮಾಡಲು ಸಾಧ್ಯ ಎಂದು ವಿಜಯಪುರ ಸೈನಿಕ ಶಾಲೆಯ ನಿವೃತ್ತ ಶಿಕ್ಷಕ ಡಾ.ಎಸ್.ಆರ್.ಹಿರೇಮಠ ಹೇಳಿದರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೊದಲು ತನ್ನನ್ನು ತಾನು ಪ್ರೀತಿಸಬೇಕು. ಆತ್ಮವಿಶ್ವಾಸದ ಬದುಕು ನಮ್ಮದಾಗಿದ್ದರೆ ಖಂಡಿತ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದರು.
ಬಹುಭಾಷೆಯ ಜ್ಞಾನದೊಂದಿಗೆ ಏಕಾಗ್ರತೆ, ನಯ-ವಿನಯ, ಶ್ರದ್ಧೆ, ಗುರಿ ಇಟ್ಟುಕೊಂಡು ಗುರುವಿನ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿ ಜೀವನ ಮುನ್ನಡೆದರೆ ನೀವು ಮತ್ತು ನಿಮ್ಮ ಪಾಲಕರು ಕಂಡ ಕನಸು ನನಸಾಗುವಲ್ಲಿ ಯಾವ ಸಂದೇಹವಿಲ್ಲ. ಅದ್ಭುತ ಪ್ರತಿಭೆಗಳಾದ ವಿದ್ಯಾರ್ಥಿಗಳು ಭಾರತದ ಭವಿಷ್ಯತ್ತಿನ ಆಸ್ತಿಯಾಗಿದ್ದಾರೆ. ಬಂಥನಾಳದ ಸಂಗನಬಸವ ಸ್ವಾಮೀಜಿ, ಡಾ.ಫ.ಗು.ಹಳಕಟ್ಟಿ, ದಿ. ಬಿ.ಎಂ.ಪಾಟೀಲ ಅವರ ಅವಿರತ ಪರಿಶ್ರಮದಿಂದ ಬಿಎಲ್ಡಿಇ ಸಂಸ್ಥೆಯ ಹೆಮ್ಮರವಾಗಿ ಬೆಳೆದಿದೆ. ಇಂತಹ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಬದುಕನ್ನು ಸುಂದರಗೊಳಿಸಿಕೊಂಡು ಉತ್ತಮ ಜೀವನ ಮಾಡುವಂತಾಗಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಆರ್.ಎ.ಪವಾರ ಮಾತನಾಡಿ, ಸಂಸ್ಥೆಯು ವಿದ್ಯಾರ್ಥಿಗಳ ಪ್ರಗತಿಗಾಗಿ ಸಾಕಷ್ಟು ಸಹಾಯ-ಸಹಕಾರ ನೀಡುತ್ತಿದೆ. ಸಂಸ್ಥೆಯ ನಂಬಿಕೆ, ವಿಶ್ವಾಸವನ್ನು ಉಳಿಸಿಕೊಂಡು ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕೆಂದರು.
ವೇದಿಕೆಯಲ್ಲಿ ಅಕ್ಕನಾಗಮ್ಮ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ವ್ಹಿ.ವ್ಹಿ.ಅಪಸಂಗಿ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಇದ್ದರು. ಕಾರ್ಯಕ್ರಮದಲ್ಲಿ ಎಂ.ಕೆ.ಯಾಧವ, ಎ.ಪಿ.ದಂಡಾವತಿ, ಎಸ್.ಎಸ್.ನಾಯ್ಕೋಡಿ, ಎಂ.ಆರ್.ಮಮದಾಪುರ, ಟಿ.ವೈ.ಮಣ್ಣೂರ, ಎ.ಜಿ.ಪಾಟೀಲ,ಭರತಕುಮಾರ, ಲಕ್ಷ್ಮಣ ಬ್ಯಾಡಗಿ, ಸೋಹೆಲ್ ಮುಲ್ಲಾ ಇತರರು ಇದ್ದರು. ೨೦೨೩-೨೪ ನೇ ಸಾಲಿನಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜು ಮತ್ತು ಸಂಸ್ಥೆಗೆ ಕೀರ್ತಿ ತಂದ ವಿದ್ಯಾರ್ಥಿಗಳಾದ ಸಾನಿಕಾ ಲಮಾಣಿ, ಅಕ್ಷತಾ ಕಲಕೇರಿ, ಬಸಮ್ಮ ಅವಟಿ, ಭಾಗ್ಯಶ್ರೀ ಮಾಮನಿ, ರಕ್ಷಿತಾ ಕರಾಡೆ ಅವರನ್ನು ಸನ್ಮಾನಿಸಲಾಯಿತು. ಸುಜಾತಾ ಕೂಡಗಿ ಪ್ರಾರ್ಥಿಸಿದರು. ಈರಣ್ಣ ಪತ್ತಾರ,ಮುಬಿನಾ ಮುಲ್ಲಾ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.