ಮುದ್ದೇಬಿಹಾಳ: ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.
ಸದರಿ ಲೋಕ ಅದಾಲತ್ ನಲ್ಲಿ ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೬೩೮೦ ಬಾಕಿ ಇರುವ ಪ್ರಕರಣಗಳಲ್ಲಿ ೨೩೮೮ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ ಒಟ್ಟು ೧೫೪೪ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲುವಾಟ್ನಿ ದಾವೆಗಳು, ಎಲ್‌ಎಸಿ ಇಪಿ ಪ್ರಕರಣಗಳು, ಎಮ್‌ವಿಸಿ ಇಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳು ಹಾಗೂ ಅಬಕಾರಿ ಇಲಾಖೆಯ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು. ಮತ್ತು ಪೂರ್ವದಾವೆ (ಪಿಎಲ್‌ಸಿ) ಪ್ರಕರಣಗಳಲ್ಲಿ ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು, ಅಬಕಾರಿ ಪ್ರಕರಣಗಳು ಹಾಗೂ ಬ್ಯಾಂಕಿನ ಪ್ರಕರಣಗಳು ಸೇರಿ ಒಟ್ಟು ೧೯೪೨ ಪ್ರಕರಣಗಳಲ್ಲಿ ೭೪೯ ಪ್ರಕರಣಗಳು ರಾಜಿ ಸಂಧಾನದ ಮೂಲಕ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಆಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಮತ್ತು ಸಮಿತಿಯ ಸದಸ್ಯ ಕಾರ್ಯದರ್ಶಿಗಳೂ ಆಗಿರುವ ಕಿರಿಯ ಸಿವಿಲ್ ನ್ಯಾಯಾಧೀಶ ಸಂಪತಕುಮಾರ ಬಳೂಲಗಿಡದ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿದರು.
ನ್ಯಾಯಾಂಗ ಸಂಧಾನಕಾರರಾಗಿ ಎಚ್.ಜಿ.ನಾಗೋಡ ಹಾಗೂ ಯಮನಪ್ಪ ವಕೀಲರುಗಳು, ಕಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ನ್ಯಾಯಾಲಯ ಆಡಳಿತ ಮುಖ್ಯಸ್ಥ ಎಸ್.ಎಸ್.ಚಕ್ರಮನಿ, ಶಿರಸ್ತೇದಾರ ಸುರೇಶ ಬಳಗಾನೂರ ತಾಲೂಕಾ ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ಪ್ರ.ದ.ಸ. ಮಂಜುಳಾ ಗಾಡದ, ಆರ್.ಎಸ್.ಕಮ್ಮಾರ, ನರ್ಮದಾ ಮರೋಳ, ಗೀತಾ ರಾಂಪೂರ, ಬಿ.ಎಸ್.ಹುಣಶ್ಯಾಳ್, ಎನ್.ಬಿ.ಮದಿಹಳ್ಳಿ, ಇಸಾಕ್ ಒಂಟಿ, ಮಹಾಂತೇಶ್ ಹಚ್ಚರೆಡ್ಡಿ, ಹಿರಿಯ ನ್ಯಾಯವಾದಿಗಳಾದ ವಿ.ಎಂ.ನಾಗಠಾಣ, ಜೆ.ಎ.ಚಿನಿವಾರ, ಎಸ್. ಆರ್. ಸಜ್ಜನ, ಏನ್.ಆರ್.ಮೊಕಾಶಿ. ನ್ಯಾಯವಾದಿಗಳಾದ ಎಂ.ಆರ್.ಪಾಟೀಲ, ಚೇತನ ಶಿವಶಿಂಪಿ, ಬಿ.ಎಂ.ಮುಂದಿನಮನಿ, ಎಸ್.ಎಂ.ಕಿಣಗಿ, ಎಲ್.ಎಸ್.ಮೇಟಿ, ಬಿ.ಎ.ನಾಡಗೌಡರ, ಪಿ.ಎನ್.ಬಿರಾದಾರ, ಆಯ್.ಎಸ್.ಹಗಟಗಿ, ಎಂ.ಎ.ಲಿಂಗಸೂರ, ಎನ್.ಬಿ.ಮುದ್ನಾಳ, ಪಿ.ಬಿ.ಗೌಡರ, ಸಾಬಣ್ಣ ಚಳ್ಳಗಿ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

