ಆಲಮಟ್ಟಿ: ಮಹಾರಾಷ್ಟ್ರದ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದ್ದರಿಂದ ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದ ಹೊರಹರಿವನ್ನು 15000 ಕ್ಯುಸೆಕ್ ಗೆ ಭಾನುವಾರ ರಾತ್ರಿ 7 ಗಂಟೆಯಿಂದ ಹೆಚ್ಚಿಸಲಾಗಿದೆ.
ಕೃಷ್ಣಾ ನದಿ ಹಿನ್ನೀರಿನಲ್ಲಿ ಯಾವುದೇ ಪ್ರವಾಹ ಸ್ಥಿತಿ ಉಂಟಾಗಬಾರದು ಎಂದು ಹೊರಹರಿವನ್ನು ಹೆಚ್ಚಿಸಲಾಗಿದೆ.
ಪ್ರವಾಹ ಸ್ಥಿತಿ ಉಂಟಾಗದಂತೆ ಸಾಕಷ್ಟು ಮುಂಜಾಗ್ರತಾ ಕ್ರಮ ಅನುಸರಿಸಲಾಗುತ್ತಿದೆ. ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಅಧಿಕಾರಿಗಳು, ಕೆಬಿಜೆಎನ್ಎಲ್ ಅಧಿಕಾರಿಗಳು ಮೇಲಿಂದ ಮೇಲೆ ನೀರಿನ ಮಾಹಿತಿ ಮಳೆ ಮಾಹಿತಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.
ಜಲಾಶಯದ ಮಟ್ಟ;
519.60 ಮೀ ಎತ್ತರದ ಜಲಾಶಯದಲ್ಲಿ ಭಾನುವಾರ ಬೆಳಿಗ್ಗೆ 517.46 ಮೀ ಇದ್ದ ನೀರಿನ ಮಟ್ಟವಿದ್ದು, 23,678 ಕ್ಯುಸೆಕ್ ಒಳಹರಿವು ಇದೆ.
ಜಲಾಶಯದಲ್ಲಿ 91 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಆಲಮಟ್ಟಿಯ ಹೊರಹರಿವು ಹೆಚ್ಚಿಸಿದ್ದರಿಂದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಕೇಂದ್ರದ 55 ಮೆಗಾವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಎರಡು ಘಟಕಗಳು ಕಾರ್ಯಾರಂಭ ಮಾಡಿದ್ದು, ಅದರಿಂದ 100 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಕೆಪಿಸಿಎಲ್ ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಐಸಿಸಿ ಸಭೆ ಜು.16 ರಂದು;
ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಎಲ್ಲಾ ಯೋಜನೆಗಳ ಕಾಲುವೆಗಳ ಜಾಲಗಳಿಗೆ ನೀರು ಹರಿಸುವ ಮಹತ್ವದ ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ (ಐಸಿಸಿ)ಇದೇ ಜು.16 ರಂದು ಬೆಂಗಳೂರಿನಲ್ಲಿ ಜರುಗಲಿದೆ.
ಐಸಿಸಿಯ ಅಧ್ಯಕ್ಷರೂ ಆಗಿರುವ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಈ ಸಭೆ ಜರುಗಲಿದೆ .
ಆ ದಿನ ಸಂಜೆ 5 ಕ್ಕೆ ವಿಕಾಸ ಸೌಧದಲ್ಲಿ ಜರುಗಲಿದೆ ಎಂದು ಐಸಿಸಿಯ ಸದಸ್ಯ ಕಾರ್ಯದರ್ಶಿಯೂ ಆಗಿರುವ ಭೀಮರಾಯನಗುಡಿ ಕಾಲುವೆ ವಲಯದ ಮುಖ್ಯ ಎಂಜಿನಿಯರ್ ತಿಳಿಸಿದ್ದಾರೆ.
ಈ ಮೊದಲು ಜು.18 ರಂದು ಈ ಸಭೆ ಕರೆಯಲಾಗಿತ್ತು. ಆದರೆ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರ ಹಿತ ಕಾಪಾಡುವ ಉದ್ದೇಶದಿಂದ, ಕಾಲುವೆಗೆ ತಕ್ಷಣ ನೀರು ಹರಿಸುವ ಉದ್ದೇಶದಿಂದ ಜು.16 ಕ್ಕೆ ಸಭೆ ಹಿಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

