Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಲು ಶಕ್ತಿಮೀರಿ ಪ್ರಯತ್ನ
(ರಾಜ್ಯ ) ಜಿಲ್ಲೆ

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಲು ಶಕ್ತಿಮೀರಿ ಪ್ರಯತ್ನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಂದಿ ಕಾರ್ಖಾನೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ ಭರವಸೆ

ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಿ ಈ ವರ್ಷದ ಹಂಗಾಮಿನಲ್ಲಿ ಕಬ್ಬು ನುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ನೀಡಿದ್ದಾರೆ.
ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಕಾರ್ಖಾನೆಗೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಉಪಸ್ಥಿತರಿದ್ದ ಇಲ್ಲಿನ ಕಾರ್ಮಿಕರು ಕಾರ್ಖಾನೆ ಉಳಿಸಿ ಎಂದು ಕೈಮುಗಿದು ಬೇಡಿಕೊಂಡ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಅಲ್ಲಿದ್ದವರ ಕರುಳು ಚುರ್ ಎನಿಸಿ ಕಣ್ಣುಗಳು ತೇವಗೊಳ್ಳುವಂತೆ ಮಾಡಿದವು. ಅಷ್ಟೇ ಅಲ್ಲ, ಈ ಪ್ರಸಂಗ ಕಾರ್ಖಾನೆಯ ಪ್ರಸ್ತುತ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿತ್ತು.
ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದ ರೈತರು, ಕಾರ್ಖಾನೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ರೈತ ಮುಖಂಡರು ಮತ್ತು ಎಂಜಿನಿಯರಿಂಗ್ ಕಂಪನಿ ಅಧಿಕಾರಿಗಳಿಂದ ಪ್ರತ್ಯೇಕವಾಗಿ ಸಭೆ ನಡೆಸಿ ಮಾಹಿತಿ ಪಡೆದ ಸಚಿವರು, ಕಾರ್ಖಾನೆ ಪುನಾರಂಭದ ಹಲವಾರು ಮಾರ್ಗೋಪಾಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಈ ವೇಳೆ ಮಾತನಾಡಿದ ನಾನಾ ಮುಖಂಡರು, ಸಹಕಾರಿ ತತ್ವದಲ್ಲಿ ಪ್ರಾರಂಭವಾದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಗಲಗಲಿ ಭಾಗದ ರೈತರ ಜೀವನಾಡಿಯಾಗಿದೆ. ಕಳೆದ 30 ವರ್ಷಗಳಿಂದ ನಮ್ಮೆಲ್ಲರ ಅಸ್ಮಿತೆಯಾಗಿದ್ದು, ಕೇವಲ ಜೋಳ, ಕಾಳು, ಕಡಿ, ಒಣ ಬೇಸಾಯಕ್ಕೆ ಸೀಮಿತರಾಗಿದ್ದ ಇಲ್ಲಿನ ರೈತರು ಕಾರ್ಖಾನೆ ಪ್ರಾರಂಭವಾದಾಗಿನಿಂದ ಕಬ್ಬು ಬೆಳೆಯುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಸುಧಾರಿಸುವಂತೆ ಮಾಡಿದೆ. ಆದರೆ, ಇತ್ತೀಚಿಗೆ ಪೈಪೋಟಿ, ಆಡಳಿತ ಮಂಡಳಿಯಲ್ಲಿ ವೃತ್ತಿಪರತೆ ಕೊರತೆ ಹಾಗೂ ಕೆಲವು ನ್ಯೂನ್ಯತೆಗಳಿಂದಾಗಿ ಕಾರ್ಖಾನೆ ಸಂಕಷ್ಟದ ಸುಳಿಗೆ ಸಿಲುಕಿದೆ. 2017 ಯೋಜನೆ ಐಜಾಕ್ ಪುಣೆ ಕಂಪನಿಗೆ ಬಾಯ್ಲರ್ ಪ್ಯಾಕೇಜ್ ಕಾಮಗಾರಿ ಗುತ್ತಿಗೆ ನೀಡಲಾಗಿತ್ತು. ಆದರೆ, ನಂತರ ಈ ಕಾಮಗಾರಿಯನ್ನು ಪುಣೆಯ ಎಸ್.ಎಸ್. ಎಂಜಿನಿಯರಿಂಗ್ ಕಂಪನಿಗೆ ನೀಡಿದ ನಂತರ 04.03.2023 ಬಾಯ್ಲರ್ ಇಎಸ್ಪಿ ಸ್ಪೋಟವಾಗಿ ಮೂರು ಜನ ಸಾವಿಗೀಡಾಗಿದ್ದಾರೆ. ಬಳಿಕ ಅದೇ ಕಂಪನಿ ಬಳಿಕ 04.07.2024 ಬಾಯಲರ್ ಪ್ರಥಮ ಇಎಸ್ಪಿ ಪ್ರಾಯೋಗಿಕವಾಗಿ ಪ್ರಾರಂಭ ಮಾಡಿತ್ತು. ಆದರೆ, 07.07.2024 ಇಎಸ್ಪಿ ಕುಸಿತವಾಗಿದೆ. ಇದರಿಂದಾಗಿ ರೈತರು ಮತ್ತು ಕಾರ್ಮಿಕರು ಕಾರ್ಖಾನೆಯ ಪುನಾರಂಭದ ಕುರಿತು ಭರವಸೆ ಕಳೆದುಕೊಂಡಿದ್ದಾರೆ. ಕಾರ್ಖಾನೆಯ ಸಾಮರ್ಥ್ಯ ವಿಸ್ತರಣ ಘಟಕ ನಿಗಧಿತ ಅವಧಿಯಲ್ಲಿ ಕಾರ್ಯ ಆರಂಭಿಸದ ಕಾರಣ ಬಹುದೊಡ್ಡ ತೊಂದರೆಯಾಗಿದೆ ಎಂದು ಅಳಲು ತೋಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆ ಪುನಾರಂಭಿಸುವ ಕುರಿತು ಎಲ್ಲ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಈ ವಾರ ಎಸ್.ಎಸ್. ಎಂಜಿನಿಯರ್ಸ್ ಅಧಿಕಾರಿಗಳನ್ನು ಬೆಂಗಳೂರಿಗೆ ಕರೆಯಿಸಿ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ಈಗಾಗಲೇ ಸಚಿವರಾದ ಎಚ್. ಕೆ. ಪಾಟೀಲ, ಆರ್. ಬಿ. ತಿಮ್ಮಾಪುರ, ಶಾಸಕ ಜೆ. ಟಿ. ಪಾಟೀಲ, ಮಾಜಿ ಸಚಿವ ಅಜಯಕುಮಾರ ಸರನಾಯಕ ಮತ್ತಿತರ ಮುಖಂಡರೊಂದಿಗೆ ಸಿಎಂ ಭೇಟಿಯಾಗಿದ್ದು, ಕಾರ್ಖಾನೆಗೆ ನೆರವಾಗಲು ಮೃದುಸಾಲ ನೀಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಕಾರ್ಖಾನೆ ಪದಾಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಮಿಕರಿಗೆ ಧೈರ್ಯ ತುಂಬಿದರು.
ಅಲ್ಲದೇ, ಈ ಸಭೆಯಲ್ಲಿಯೇ ಪುಣೆಯ ಎಸ್. ಎಸ್. ಎಂಜಿನಿಯರ್ಸ್ ಕಂಪನಿಯ ಮಾಲಿಕ ಎಸ್. ಬಿ. ಬರ್ಡ್ ಅವರ ಜೊತೆ ಮೊಬೈಲಿನಲ್ಲಿ ಮಾತನಾಡಿದ ಸಚಿವರು, ಮುಂಬರುವ ಹಂಗಾಮಿನಲ್ಲಿ ಕಬ್ಬು ನುರಿಸಲು ಅನುಕೂಲ ಮಾಡಿಕೊಡಲು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬೀಳಗಿ ಶಾಸಕ ಜೆ. ಟಿ. ಪಾಟೀಲ, ಕಾರ್ಖಾನೆ ಉಪಾಧ್ಯಕ್ಷ ಎ. ಪಿ. ಲೆಂಕೆಣ್ಣವರ, ನಿರ್ದೇಶಕರಾದ ಎ. ಬಿ. ದೇಸಾಯಿ, ಬಿ. ಡಿ. ಪಾಟೀಲ, ಎಸ್. ಟಿ. ಪಾಟೀಲ ಲಿಂಗನೂರ, ಗುರಲಿಂಗಪ್ಪ ಅಂಗಡಿ, ರಮೇಶ ಜಕರಡ್ಡಿ, ಮುಖಂಡರಾದ ಕೆ. ಎಚ್. ಮುಂಬಾರೆಡ್ಡಿ, ಬಸವರಾಜ ದೇಸಾಯಿ, ಜಿ. ಡಿ. ದೇಸಾಯಿ, ಕಾಳಗಿ ಶೆಟ್ಟರ ಸುತ್ತಮುತ್ತ ಗ್ರಾಮಸ್ಥರು. ಎಸ್. ಎಸ್. ಎಂಜಿನಿಯರ್ ಯೋಜನೆ ಉಪಾಧ್ಯಕ್ಷ ಅನಿರುದ್ಧ ಕುಲಕರ್ಣಿ, ಕಾರ್ಖಾನೆಯ ಪ್ರದಾನ ವ್ಯವಸ್ಥಾಪಕರ ಜಯರಾಮ ಆಚಾರ್ಯ, ಪ್ರಭಾರ ವ್ಯವಸ್ಥಾಪಕ ಎಂ. ಬಿ. ಶೆಟ್ಟಿ, ಮುಖ್ಯ ಲೆಕ್ಕಾಧಿಕಾಧಿಕಾರಿ ಎಸ್. ಬಿ. ಗೋಟಖಿಂಡಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.