ಅಫಜಲಪುರ: ಕೃಷಿ ಇಲಾಖೆಯ ಕೃಷಿ ಸಂಜೀವಿನಿ ವಾಹನಕ್ಕೆ ಸಂಸದ ರಾದಾಕೃಷ್ಣ ದೊಡ್ಮನಿ ಅವರು ಶುಕ್ರವಾರ ಚಾಲನೆ ನೀಡಿದರು.
ಪಟ್ಟಣದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸಲು ಆಗಮಿಸಿದ್ದಾಗ ಕೃಷಿ ಇಲಾಖೆಯ ರೈತ ಸಂಜೀವಿನಿ ವಾಹನಕ್ಕೆ ಚಾಲನೆ ನೀಡಿದರು.
ಕೃಷಿ ಸಂಜೀವಿನಿ ವಾಹನವು ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನ ರೈತ ಬೆಳೆ ಸಮೀಕ್ಷೆ ಮಾಡಲಿದ್ದು ಫಸಲ ಬೀಮಾ ಯೋಜನೆ ಬೆಳೆ ವಿಮೆ ಕುರಿತು ಮಾಹಿತಯನ್ನೂ ಈ ವಾಹನದ ಮೂಲಕ ನೀಡಲಿದೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್ ಪಾಟೀಲ್, ಶಾಸಕ ಎಂ.ವೈ ಪಾಟೀಲ್, ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಕೆಪಿಸಿಸಿ ಸದಸ್ಯರಾದ ಪಪ್ಪು ಪಟೇಲ, ಅರುಣಕುಮಾರ ಪಾಟೀಲ, ಮಾಜಿ ಸಚಿವ ರೇವೂನಾಯಕ ಬೆಳಮಗಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎಚ್ ಗಡಗಿಮನಿ, ತೋಟಗಾರಿಕೆ ಇಲಾಖೆ ಅಧಿಕಾರಿ ಶಿವಯೋಗಿ, ಸಹಾಯಕ ಕೃಷಿ ಅಧಿಕಾರಿ ಆನಂದ ಅವರಾದ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

