Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೇತುವೆ ಸಮಸ್ಯೆಗಳಿಗೆ ಪರಿಹಾರ ನೀಡುವರೇ ತ್ರಿವಳಿ ಶಾಸಕರು?
(ರಾಜ್ಯ ) ಜಿಲ್ಲೆ

ಸೇತುವೆ ಸಮಸ್ಯೆಗಳಿಗೆ ಪರಿಹಾರ ನೀಡುವರೇ ತ್ರಿವಳಿ ಶಾಸಕರು?

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೊಂಡ ಬಿದ್ದು ಕಂಟಕವಾಗಿ ಕಾಡುತ್ತಿದೆ ದೇವಣಗಾಂವ-ಸೊನ್ನ ಸೇತುವೆ | ಮಣೂರ ಭುಂಯಾರ ಸೇತುವೆಗೆ ತಡೆಗೋಡೆ ಇಲ್ಲದ್ದಕ್ಕೆ ಆತಂಕ

– ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ: ಒಂದು ಊರಿನಿಂದ ಇನ್ನೊಂದು ಊರಿಗೆ ಹೋಗಲು ಸುಗಮವಾದ ರಸ್ತೆ ಸಂಪರ್ಕವಿರಬೇಕು ಅದೇ ರೀತಿಯಲ್ಲಿ ಒಂದು ಹಳ್ಳ, ಹೊಳೆ, ನದಿಗಳನ್ನು ದಾಟಿ ಇನ್ನೊಂದು ಊರಿಗೆ ಹೋಗಲು ಸೇತುವೆಗಳು ಬೇಕಾಗುತ್ತದೆ. ಆದರೆ ಮೂರು ತಾಲೂಕುಗಳಿಗೆ ಸಂಬಂಧ ಪಟ್ಟ ಎರಡು ಸೇತುವೆಗಳು ಸಮಸ್ಯೆಯಾಗಿ ಕಾಡುತ್ತಿದ್ದು ತ್ರಿವಳಿ ಶಾಸಕರು ಸೇತುವೆಗಳ ಸಮಸ್ಯೆಗಳನ್ನು ಸರಿಪಡಿಸುವರೇ ಎನ್ನುವುದು ವಾಹನ ಸವಾರರು, ಸಾರ್ವಜನಿಕರ ಪ್ರಶ್ನೆಯಾಗಿದೆ.
ಹೊಂಡ ಬಿದ್ದು ಕಂಟಕವಾಗಿ ಕಾಡುತ್ತಿದೆ ದೇವಣಗಾಂವ ಸೊನ್ನ ಸೇತುವೆ: ಅಫಜಲಪುರ ತಾಲೂಕಿನ ಸೊನ್ನ ಹಾಗೂ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮಗಳ ಮಧ್ಯ ಭೀಮಾ ನದಿಗೆ ಅಡ್ಡಲಾಗಿ ದೊಡ್ಡ ಪ್ರಮಾಣದ ಸೇತುವೆ ನಿರ್ಮಿಸಲಾಗಿದೆ. ಈ ಸೇತುವೆ ಮೇಲಿನ ರಸ್ತೆ ಹದಗೆಟ್ಟಿದ್ದು ಎಲ್ಲೆಂದರಲ್ಲಿ ದೊಡ್ಡ ಹೊಂಡಗಳು ಬಿದ್ದಿವೆ. ಈ ಹೊಂಡ ಬಿದ್ದ ರಸ್ತೆಯಲ್ಲಿ ಸಂಚರಿಸುವುದು ವಾಹನ ಸವಾರರಿಗೆ ಸವಾಲಾಗಿ ಪರಿಣಮಿಸಿದೆ. ಅಲ್ಲದೆ ಯಾವ ಸಂದರ್ಭದಲ್ಲಿ ಏನು ಅವಗಢ ಸಂಭವಿಸಲಿದೆಯೋ ತಿಳಿಯದಂತಾಗಿದೆ. ಸಿಂದಗಿ ತಾಲೂಕಿನ ವ್ಯಾಪ್ತಿಗೆ ಬರುವ ದೇವಣಗಾಂವ, ಅಫಜಲಪುರ ತಾಲೂಕಿನ ವ್ಯಾಪ್ತಿಗೆ ಬರುವ ಸೊನ್ನ ಮಧ್ಯ ಇರುವ ಈ ಸೇತುವೆ ಎರಡು ಜಿಲ್ಲೆಗಳ ಸಂಪರ್ಕ ಕೊಂಡಿಯಾಗಿಯೂ ನಿಂತುಕೊಂಡಿದೆ. ಇದನ್ನು ಕೂಡಲೇ ರಿಪೇರಿ ಮಾಡಿಸದಿದ್ದರೆ ಸಾಕಷ್ಟು ಸಮಸ್ಯೆಗಳಾಗುವುದಂತು ಪಕ್ಕಾ.
ಮಣೂರ ಭೂಂಯಾರ ಸೇತುವೆಗೆ ತಡೆಗೋಡೆ ಇಲ್ಲದ್ದಕ್ಕೆ ಆತಂಕ: ಇನ್ನೂ ಪಕ್ಕದ ಇಂಡಿ ತಾಲೂಕಿನ ಭೂಂಯಾರ ದಿಂದ ಅಫಜಲಪುರ ತಾಲೂಕಿನ ಮಣೂರ ಗ್ರಾಮದ ಮಧ್ಯ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿದೆ. ಈ ಸೇತುವೆ ನಿರ್ಮಿಸಿ ಅನೇಕ ವರ್ಷಗಳು ಕಳೆದರೂ ಇದುವರೆಗೂ ಸೇತುವೆಗೆ ತಡೆಗೋಡೆ ನಿರ್ಮಿಸಿಲ್ಲ. ಇದರಿಂದಾಗಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಮಳೆ ಹೆಚ್ಚಾಗಿ ನದಿಯಲ್ಲಿ ಪ್ರವಾಹ ಬಂದಾಗಲಂತೂ ಈ ಸೇತುವೆ ಭಯಂಕರವಾಗಿ ಕಾಣುತ್ತದೆ. ವಾಹನ ಸವಾರರು ಸ್ವಲ್ಪ ಮೈ ಮರೆತರೂ ಜೀವ ಹೋಗುವುದು ಪಕ್ಕಾ ಎನ್ನುವಂತಾಗಿದೆ.
ಒಟ್ಟಿನಲ್ಲಿ ಈ ಎರಡು ಸೇತುವೆಗಳು ಈಗ ರಿಪೇರಿ ಹಂತಕ್ಕೆ ಬಂದಿದ್ದು ಕೂಡಲೇ ಇಂಡಿ, ಸಿಂದಗಿ ಹಾಗೂ ಅಫಜಲಪುರ ಶಾಸಕರು ಮುತುವರ್ಜಿ ವಹಿಸಿ ಸೇತುವೆಗಳನ್ನು ಸರಿಪಡಿಸುವ ಕೆಲಸ ಮಾಡಬೇಕೆನ್ನುವುದು ವಾಹನ ಸವಾರರು, ಸಾರ್ವಜನಿಕರ ಒತ್ತಾಸೆಯಾಗಿದೆ.

” ಸೇತುವೆ ಮೇಲಿನ ರಸ್ತೆ ಹದಗೆಟ್ಟ ಕುರಿತು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ.”

– ಅಶೋಕ ಮನಗೂಳಿ
ಸಿಂದಗಿ ಶಾಸಕರು

” ಭೂಂಯಾರ, ಮಣೂರ ಮಧ್ಯದ ಸೇತುವೆ ತಡೆಗೋಡೆ ಇಲ್ಲದ್ದಕ್ಕೆ ಸ್ವಲ್ಪ ಮಟ್ಟಿನ ಸಮಸ್ಯೆ ಆಗುತ್ತಿದೆ. ಸೊನ್ನ ಬ್ಯಾರೇಜ್ ಎತ್ತರ ಹೆಚ್ಚಿಸಿದ್ದರಿಂದ ಭೂಂಯಾರ್ ಸೇತುವೆ ಮುಳುಗಡೆ ಲೆಕ್ಕದಲ್ಲಿ ಬರುತ್ತದೆ ಹೀಗಾಗಿ ಅದಕ್ಕೆ ತಡೆಗೋಡೆ ಕಟ್ಟಿಸಲಾಗುತ್ತಿಲ್ಲ. ಆದರೂ ಪ್ರಯಾಣಿಕರ ಹಿತದೃಷ್ಟಿಯಿಂದ ಏನಾದರೂ ವ್ಯವಸ್ಥೆ ಮಾಡಿಸಲಾಗುತ್ತದೆ.”

– ಯಶವಂತ್ರಾಯಗೌಡ ಪಾಟೀಲ್
ಇಂಡಿ ಶಾಸಕರು

” ಸೊನ್ನ, ದೇವಣಗಾಂವ, ಭೂಂಯಾರ, ಮಣೂರ ಗ್ರಾಮಗಳ ನಡುವೆ ಇರುವ ಎರಡು ಸೇತುವೆಗಳ ರಿಪೇರಿ ಕುರಿತು ಇಂಡಿ, ಸಿಂದಗಿ ಶಾಸಕರೊಂದಿಗೆ ಚರ್ಚಿಸಿ, ಅಧಿಕಾರಿಗಳ ಜೊತೆಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.”

– ಎಂ.ವೈ ಪಾಟೀಲ್
ಅಫಜಲಪುರ ಶಾಸಕರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.