Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪಘಾತ ತಗ್ಗಿಸಲು ಸುರಕ್ಷತಾ ಉಪಕ್ರಮ ಕೈಗೊಳ್ಳಿ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಅಪಘಾತ ತಗ್ಗಿಸಲು ಸುರಕ್ಷತಾ ಉಪಕ್ರಮ ಕೈಗೊಳ್ಳಿ :ಡಿಸಿ ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಗ್ನಲ್-ರೋಡ ಬ್ಯಾರಿಕೇಡ್, ಮಾಹಿತಿ ಫಲಕ, ತಿರುವು ರಸ್ತೆಗಳ ಮಾಹಿತಿ, ವೃತ್ತಗಳ ಮಾಹಿತಿ ಅಳವಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳುವಳಿಕೆ ನೀಡಬೇಕು. ರಸ್ತೆಯ ಸುಧಾರಣೆ ಕೈಗೊಂಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ತಕ್ಷಣ ಸೂಕ್ತ ಸಮಯದಲ್ಲಿ ಚಿಕಿತ್ಸೆ ಒದಗಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ತುರ್ತು ವೈದ್ಯಕೀಯ ವ್ಯವಸ್ಥೆ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಅಪಘಾತ ಪ್ರಕರಣಗಳು ಸಂಭವಿಸಿದ ಸಂದರ್ಭಧಲ್ಲಿ ಸಾವು ನೋವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆ ಒದಗಿಸಲು ಹೆದ್ದಾರಿಗಳಲ್ಲಿ ತುರ್ತು ದೂರವಾಣಿ ೧೦೮ ಹೆದ್ದಾರಿ ಹೆಲ್ಪಲೈನ್ ೧೦೩೩ ಟೋಲ್‌ಫ್ರೀ ಫಲಕಗಳನ್ನು ಅಳವಡಿಸಬೇಕು. ಈ ದೂರವಾಣಿಗಳಿಗೆ ಬಂದಿರುವ ಕರೆಗಳಿಗೆ ತುರ್ತಾಗಿ ಸ್ಪಂದಿಸಬೇಕು. ತುರ್ತು ಸಂದರ್ಭಗಳಲ್ಲಿ ಯಾವುದೇ ನಿರ್ಲಕ್ಷ್ಯ ತೋರದೇ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಆದ್ಯತೆ ಮೇಲೆ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಸಭೆಗೆ ಮಾಹಿತಿ ನೀಡಿ, ಜಿಲ್ಲಾಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಅಪಘಾತ ಪ್ರಕರಣಗಳಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಹೇಳಿದರು.
ವಿಜಯಪುರ ನಗರದ ಗಾಂಧಿವೃತ್ತದಿಂದ ಆರಂಭವಾಗುವ ರಸ್ತಗೆಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಸಂಚಾರ ಮಾಡದಂತೆ ಕ್ರಮ ವಹಿಸಬೇಕು. ಪಾದಚಾರಿಗಳಿಗು ಸಹ ಯಾವುದೇ ತೊಂದರೆಯಾಗದಂತೆ ನೋಡಿಕೊಂಡು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ಕ್ರಮ ವಹಿಸಬೇಕು. ನಗರದೊಳಗೆ ಅವಶ್ಯಕವಿದ್ದೆಡೆ ಮಾತ್ರ ರೋಡ್ ಬ್ರೇಕ್ ಅಳವಡಿಕೆಗೆ ಕ್ರಮ ವಹಿಸಬೇಕು. ಹೆದ್ದಾರಿ ಪೆಟ್ರೋಲಿಂಗ್ ವಾಹನ ಹಗಲು-ರಾತ್ರಿ ಗಸ್ತು ನಡೆಸುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಶಾಲಾ ಮಕ್ಕಳು ದ್ವಿಚಕ್ರ ವಾಹನ ಬಳಕೆ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸೂಕ್ತ ಜಾಗೃತಿ ಮೂಡಿಸಬೇಕು. ಶಾಲೆಗಳಲ್ಲಿ ರಸ್ತೆ ಸುರಕ್ಷತಾ ಅನುಸರಿಸುವ ಅರಿವು ಕಾರ್ಯಕ್ರಮ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ಶಾಲಾ ವಾಹನಗಳಿಗೆ ಅನುಮತಿ ನೀಡುವಾಗ ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲಿಸಿ ಅನುಮತಿ ನೀಡಬೇಕು. ಶಾಲಾ ವಾಹನಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಕುರಿತು ಪರಿಶೀಲನೆ ನಡೆಸಬೇಕು.
ಅಳಗಿನಾಳದ ಹತ್ತಿರ ರಸ್ತೆಯ ಪಕ್ಕದಲ್ಲಿ ಬಾವಿ ಇದ್ದು, ರಸ್ತೆ ಪಕ್ಕದಲ್ಲಿರುವುದರಿಂದ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದು, ಯಾವುದೇ ಅವಘಡಗಳು ಸಂಭವಿಸಿದಂತೆ ಸೂಕ್ತ ಸುರಕ್ಷತಾ ಕ್ರಮ ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿನ ಅಪಘಾತ ಸ್ಥಳಗಳಲ್ಲಿ ಇಂದಿನ ಸಭೆಯಲ್ಲಿ ನೀಡಿದ ನಿರ್ದೇಶನಗಳನ್ನು ಚಾಚುತಪ್ಪದೇ ಪಾಲಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ, ಅಪಘಾತ ತಪ್ಪಿಸಿ ಅಮೂಲ್ಯ ಜೀವ ಉಳಿಸುವ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸದೇ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತನಾಡಿ, ಹಡಗಲಿ-ದೇವರಹಿಪ್ಪರಗಿ ಮಾಗ, ವಿಜಯಪುರ ನಗರದ ಪಾಟೀಲ್ ಪ್ಲಾನೆಟ್ ಲಿಂಗದ್ ಗುಡಿ ರಸ್ತೆ, ವಿಜಯಪುರ ಸೋಲಾಪುರ ಮಾರ್ಗದಲ್ಲಿನ ಹಳಗುಣಕಿ ಕ್ರಾಸ್ ಹತ್ತಿರ ಅಗಸನಾಳ ಸೇರಿದಂತೆ ಮುಂತಾದ ಅಪಘಾತ ಸ್ಥಳಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಟಿ ಜಂಕ್ಷನ್ ಸ್ಥಳದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ, ಸೈನೇಜ್ ವ್ಯವಸ್ಥೆ ಮಾಡಿ ಪರಿಹಾರ ಕ್ರಮಗಳನ್ನು ಕೈಗೊಂಡು ಅಪಘಾತ ತಪ್ಪಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ರಾಜು ಮುಜುಮದಾರ ಅವರು ಈ ಹಿಂದಿನ ಸಭೆಯ ನಿರ್ದೇಶನದಂತೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ವಿಜಯಪುರ ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಇಂಡಿ ಉಪ ವಿಭಾಗಾಧಿಕಾರಿ ಆಬಿದ ಗದ್ಯಾಳ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.