Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಂಟಾ ನಿವೇಶನ ರಚನೆ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ :ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಗುಂಟಾ ನಿವೇಶನ ರಚನೆ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ :ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗುಂಟೆವಾರು ನಿವೇಶನ ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರ | ನೀರಿನ ಸಂಪರ್ಕ-ವಿದ್ಯುತ್ ಸಂಪರ್ಕಕ್ಕೆ ಅನುಮತಿ ಇಲ್ಲ

ವಿಜಯಪುರ: ನಗರದಾದ್ಯಂತ ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದಿಂದ ಅನುಮೋದನೆ ಪಡೆಯದೆ ಕೆಲ ಭೂ ಮಾಲೀಕರು ತಮ್ಮ ಶೇತ್ಕಿ ಜಮೀನುಗಳನ್ನು ಖಾಸಗಿಯಾಗಿ ವಿಭಾಗಿಸಿ ಗುಂಟೆವಾರು ನಿವೇಶನಗಳನ್ನು ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರವಾಗಿದ್ದು, ಈ ರೀತಿಯ ಅನಧಿಕೃತ ಗುಂಟಾ ನಿವೇಶನಗಳ ನಿರ್ಮಾಣದ ಕಡಿವಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಸರ್ಕಾರದಿಂದ ಅನುಮೋದನೆಯಾದ ಮಹಾಯೋಜನೆಯಲ್ಲಿ ಪ್ರಸ್ತಾಪಿಸಿರುವ ರಸ್ತೆಗಳಲ್ಲಿ ನಿವೇಶನ-ಕಟ್ಟಡಗಳನ್ನು ಹಾಗೂ ಅನಧಿಕೃತ ಗುಂಟಾ ನಿವೇಶನ ರಚನೆ ತಡೆಗಟ್ಟುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗುಂಟಾ ನಿವೇಶನ ಮಾಡುವ ಭೂ ಮಾಲೀಕರಿಗೆ ಹಲವು ಬಾರಿ ತಿಳುವಳಿಕೆ ನೀಡಿದರೂ ಸಹ ಗುಂಟಾ ನಿವೇಶನ ರಚನೆ ಕಂಡು ಬಂದಿದ್ದು, ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅನಧಿಕೃತವಾಗಿ ನಿರ್ಮಾಣಗೊಂಡ ಬಡಾವಣೆಗಳ ನಿವೇಶನಗಳಿಗೆ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ವತಿಯಿಂದ ನೀರಿನ ಸಂಪರ್ಕ, ಹೆಸ್ಕಾಂ ವತಿಯಿಂದ ವಿದ್ಯುತ್ ಸಂಪರ್ಕ ಅಳವಡಿಸದೇ ತಡೆಹಿಡಿಯಬೇಕು. ಸಮರ್ಪಕ ದಾಖಲೆಗಳಿದ್ದರೆ ಮಾತ್ರ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ಸಾರ್ವಜನಿಕರು ಸಹ ದಾಖಲೆ ಇಲ್ಲದ ಅನಧಿಕೃತ ಗುಂಟಾ ನಿವೇಶನ ಖರೀದಿ ಮಾಡದೇ ನಗರ ಅಭಿವೃದ್ದಿಗೆ ಸಹಕರಿಸುವಂತೆ ಅವರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರದಿಂದ ಅನುಮೋದನೆಯಾದ ಮಹಾಯೋಜನೆಯ ರಸ್ತೆಗಳ ಸಮೀಕ್ಷೆ ನಡೆಸಿ, ಅತಿಕ್ರಮಣವಾದ ಜಾಗ ತೆರವುಗೊಳಿಸಿ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಗರದ ವಿವಿಧೆಡೆ ರಸ್ತೆಗಳ ಮೇಲೆ ಅನಧಿಕೃತವಾಗಿ ನಿವೇಶನ ಹಾಗೂ ಕಟ್ಟಡಗಳನ್ನು ರಚಿಸುತ್ತಿರುವುದು ಕಂಡು ಬಂದಿದ್ದು, ಕೂಡಲೇ ತಡೆಗಟ್ಟಿ ಈ ಜಾಗವನ್ನು ತೆರವುಗೊಳಿಸುವ ಮೂಲಕ ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು. ವಿಜಯಪುರ ನಗರದ ಯೋಜನಾ ಪ್ರದೇಶಕ್ಕೆ ಸರ್ಕಾರದಿಂದ ಅನುಮೋದನೆಯಾದ ಮಹಾಯೋಜನೆಯ ರಸ್ತೆಗಳ ಮೇಲೆ ಅನಧಿಕೃತವಾಗಿ ನಿವೇಶನ ಹಾಗೂ ಕಟ್ಟಡಗಳು ನಿರ್ಮಾಣವಾಗದಂತೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೊನಾವಣೆ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.