Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾದಕ ದ್ರವ್ಯ ನಿರ್ಮೂಲನೆಗೆ ಅರಿವು ಮೂಡಿಸಲು ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಮಾದಕ ದ್ರವ್ಯ ನಿರ್ಮೂಲನೆಗೆ ಅರಿವು ಮೂಡಿಸಲು ಕ್ರಮ ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾದಕ ದ್ರವ್ಯ ನಿರ್ಮೂಲನೆ ಕುರಿತ ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ವಿಜಯಪುರ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಮಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯ ನಿರ್ಮೂಲನೆ ಕುರಿತ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜ್‌ಗಳ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಉಪ ಅರಣ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮಾದಕ ದ್ರವ್ಯ, ಗಾಂಜಾ ಸಸಿ-ಗಿಡಗಳು ಬೆಳೆಯದಂತೆ ಕಟ್ಟೆಚ್ಚರ ವಹಿಸಬೇಕು. ಗಾಂಜಾ ಗಿಡಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅಬಕಾರ ಇಲಾಖೆ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವ-ಸಂಗ್ರಹಿಸುವವರ ಮೇಲೆ ತೀವ್ರ ನಿಗಾ ಇಡಬೇಕು. ಈ ಕುರಿತು ಮಾಹಿತಿ ದೊರೆಯಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ಒದಗಿಸಬೇಕು. ಔಷದ ನಿಯಂತ್ರಕ ಇಲಾಖೆ ಮಾದಕ ಅಂಶಗಳುಳ್ಳ ಔಷಧಿಯನ್ನು ಮಳಿಗೆಗಳಲ್ಲಿ ಕಡ್ಡಾಯವಾಗಿ ಅನುಮತಿ ಪಡೆದು ಮಾರಾಟಕ್ಕೆ ಅವಕಾಶ ಒದಗಿಸಬೇಕು. ಈ ಕುರಿತು ತೀವ್ರ ನಿಗಾ ಇಡುವಂತೆ ಅವರು ಸೂಚನೆ ನೀಡಿದರು.
ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಕೆಲವು ಭಾಗಗಳಲ್ಲಿ ಪದೇ ಪದೇ ಮಾದಕ ವಸ್ತುಗಳ ಕುರಿತು ವರದಿಯಾದ ಪ್ರದೇಶಗಳ ಮೇಲೆ ತೀವ್ರ ಗಮನ ಹರಿಸಬೇಕು. ಶಾಲಾ ಆವರಣದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಿದ್ದು, ಮಾರಾಟ ಮಾಡುವವರ ಮೇಲೆ ತೀವ್ರ ನಿಗಾವಹಿಸಬೇಕು. ವಿವಿಧ ವಸತಿ ನಿಲಯಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಾಗದಂತೆ ನೋಡಿಕೊಳ್ಳಬೇಕು. ವಸತಿ ನಿಲಯಗಳಲ್ಲಿ ಅನಧಿಕೃತ ವ್ಯಕ್ತಿಗಳು ಇರುವುದು ಕಂಡು ಬಂದಲ್ಲಿ ಸಂಬಂಧಿಸಿದ ನಿಲಯಪಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಲಾಗುವುದು. ಈ ಕುರಿತು ವಸತಿ ನಿಲಯಗಳಲ್ಲಿ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ ಅವರು ಮಾತನಾಡಿ, ಮಾದಕ ದ್ರವ್ಯ ನಿರ್ಮೂಲನೆಗಾಗಿ ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಜಿಲ್ಲೆಯಾದ್ಯಂತ ಕಳೆದ ೩ ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ೨೩೮ ಕೆಜಿ ೪೫ ಗ್ರಾಂ ಮಾದಕ ದ್ರವ್ಯಗಳನ್ನು ನಾಶಪಡಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಬಕಾರಿ ಇಲಾಖೆಯ ಉಪ ಆಯುಕ್ತ ಸಂಗನಗೌಡ, ಜಿಲ್ಲಾ ಶಸ್ತç ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ ಹುಬ್ಬಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ರಾಜು ಮುಜುಮದಾರ, ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ಎನ್.ಎಂ.ಗಬಸಾವಳಗಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಳ್ಳಿ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಈರಣ್ಣ ಆಶಾಪುರ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.