ವಿಜಯಪುರ: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ (ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ) ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ವಿಜಯಕುಮಾರ ಆಜೂರ ಜಿಲ್ಲಾ ಪಂಚಾಯತ ಡಿ.ಎಸ್ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸರಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವಿವಿಧ ಬೇಡಿಕೆಗಳಾದ ಶಿಕ್ಷಕರ ಸಾಮಾನ್ಯ ವರ್ಗಾವಣೆಯನ್ನು ಎಪ್ರಿಲ್/ಮೇ ತಿಂಗಳನಲ್ಲಿ ಜಾರಿಗೊಳಿಸುವುದು, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವೇತನವನ್ನು ಮಾಡುವುದು, ೭ ನೇ ವೇತನ ಆಯೋಗ ಜಾರಿಗೊಳಿಸುವುದು, ಪ್ರತಿವರ್ಷ ನಿಯಮಿತವಾಗಿ ಪ್ರೌಢಶಾಲಾ ಶಿಕ್ಷಕರ ಮುಖ್ಯೋಪಾಧ್ಯಾಯರ ಹುದ್ದೆಗೆ ಮುಂಬಡ್ತಿ ನೀಡುವುದು, ಜ್ಯೋತಿ ಸಂಜೀವಿನಿ ಸ್ಕಿಮ್‌ನ್ನು ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವಿಸ್ತರಿಸುವುದು, ಹಾಗು ಪ್ರೌಢಶಾಲಾ ಶಿಕ್ಷಕರನ್ನು ಪದವಿಪೂರ್ವ ಕಾಲೇಜುಗಳಿಗೆ ಮುಂಬಡ್ತಿ ನೀಡುವುದು ಹಾಗು ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಅರುಣ ಶಹಾಪೂರ, ಎ.ಎಸ್. ಬಿರಾದಾರ, ವೈ. ಎಮ್. ಪ್ರಧಾನಿ, ಜಿ.ಎಸ್. ಸಾವಳಗಿ, ಎಸ್.ಜಿ. ಹಂಚನಾಳ, ಎಸ್,ಬಿ. ಜೋಶಿ ಮುಂತಾದವರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

