Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧಾರವಾಡದಲ್ಲಿ ಪಂ.ಪಂಚಾಕ್ಷರ ಗವಾಯಿಗಳ ಸ್ಮಾರಕ ನಿರ್ಮಾಣವಾಗಲಿ
(ರಾಜ್ಯ ) ಜಿಲ್ಲೆ

ಧಾರವಾಡದಲ್ಲಿ ಪಂ.ಪಂಚಾಕ್ಷರ ಗವಾಯಿಗಳ ಸ್ಮಾರಕ ನಿರ್ಮಾಣವಾಗಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಂ.ಪಂಚಾಕ್ಷರ ಗವಾಯಿಗಳ ಪುಣ್ಯಸ್ಮರಣೆಯಲ್ಲಿ ಪಂ.ಪುಟ್ಟರಾಜ ಸೇವಾ ಸಮಿತಿ ಸಂಸ್ಥಾಪಕ ಚನ್ನವೀರಸ್ವಾಮಿ (ಕಡಣಿ) ಆಗ್ರಹ

ಧಾರವಾಡ: ಉತ್ತರದ ಸಂಗೀತವನ್ನು ದಕ್ಷಿಣಕ್ಕೆ ತಂದ ಪ್ರಮುಖರಲ್ಲಿ ಒಬ್ಬರಾದ, ಶಿಷ್ಯ ಪರಂಪರೆಯ ಮೂಲಕ ಧಾರವಾಡಕ್ಕೆ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ತವರು ಎನ್ನುವ ಖ್ಯಾತಿ ತಂದು ಕೊಟ್ಟ, ವಚನಗಳಿಗೆ ರಾಗ ಸಂಯೋಜಿಸಿ ಹಾಡಿ, ವಚನ ಗಾಯನ ಪರಂಪರೆಗೆ ನಾಂದಿ ಹಾಡಿದ, ಮಾತ್ರವಲ್ಲದೇ ಭಾರತ ರತ್ನ ಭೀಮಸೇನ ಜೋಷಿಯವರಂತಹ ಮಹಾನ ಸಂಗೀತ ದಿಗ್ಗಜರನ್ನು ಕೊಡುಗೆಯಾಗಿ ನೀಡಿದ ಶ್ರೇಯಸ್ಸು ಗಾನಯೋಗಿ ಪಂಚಾಕ್ಷರ ಗವಾಯಿಗಳವರಿಗೆ ಸಲ್ಲುತ್ತದೆ. ಇಂತಹ ಮಹಾನ್ ವಿಭೂತಿ ಪುರುಷ ಗಾನಯೋಗಿ ಪಂ. ಪಂಚಾಕ್ಷರ ಗವಾಯಿಗಳವರ ಸ್ಮಾರಕ ಧಾರವಾಡದಲ್ಲಿ ಆಗಬೇಕು ಎಂದು, ಡಾ. ಪಂ.ಪುಟ್ಟರಾಜ ಸೇವಾ ಸಮಿತಿ ಸಂಸ್ಥಾಪಕರಾದ ವೇ. ಚನ್ನವೀರಸ್ವಾಮಿ ಹಿರೇಮಠ (ಕಡಣಿ) ಹೇಳಿದರು.
ಅವರು ಜು.೧೪ ರಂದು ಸಂಜೆ ಧಾರವಾಡದ ರಂಗಾಯಣದಲ್ಲಿ, ಗದುಗಿನ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಆಯೋಜಿಸಿದ್ದ ಗಾನಯೋಗಿ ಪಂ. ಪಂಚಾಕ್ಷರ ಗವಾಯಿಗಳವರ ೮೦ನೆಯ ಪುಣ್ಯಸ್ಮರಣೆ ‘ಗುರು ಗುಣಗಾನ’ ಕವಿಗೋಷ್ಠಿ, ಕಾವ್ಯಗಾಯನ ಮತ್ತು ನೃತ್ಯ ನಮನವನ್ನು ಒಳಗೊಂಡ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು. ಶ್ರೀಮತಿ ಮೃಣಾಲ ಜೋಶಿ ಗುರು ಪಂಚಾಕ್ಷರಿ ಗವಾಯಿಗಳವರ ಜೀವನ ಸಾಧನೆ ಸಂದೇಶವನ್ನು ವಿವರವಾಗಿ ವಿವರಿಸಿ ಪೂಜ್ಯರ ಕನ್ನಡ ಅಭಿಮಾನ, ಸ್ವದೇಶಿ ಅಭಿಮಾನ ಕುರಿತು ತಿಳಿಸಿದ್ದಲ್ಲದೆ ಅವರ ಆರೋಗ್ಯ ಕೆಟ್ಟಾಗ ದೇಶಿ ಔಷಧಿಯನ್ನೇ ಸ್ವೀಕರಿಸಿದ್ದರು. ಅವರು ಕೇವಲ 52 ವರ್ಷ ಬದುಕಿದ್ದರೂ ಆ ಸಾಮಾನ್ಯ ಸಾಧನೆ ಮಾಡಿದ ಪೂಜ್ಯ ಪಂಚಾಕ್ಷರ ಗವಾಯಿಗಳ ತತ್ವ ಆಚರಣೆ ಅಳವಡಿಸಿಕೊಳ್ಳುವ ಮೂಲಕ ನಾವು ಪಂಚಾಕ್ಷರ ಗವಾಯಿಗಳನ್ನು ಮನೆ ಮನೆಗೆ ಕರೆದೊಯ್ಯಬೇಕು ಎಂದು ಮನ ಮುಟ್ಟುವ ಹಾಗೆ ಮಾತಾಡಿದರು.
ಡಾ.ದ.ರಾ.ಬೇಂದ್ರೆ ರಾಷ್ಟ್ರಿಯ ಸ್ಮಾರಕ ಟ್ರಸ್ಟ್, ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ, ಧಾರವಾಡ. ಕ. ವಿ. ವಿ. ಲಲಿತಕಲಾ ಹಾಗೂ ಸಂಗೀತ ಮಹಾವಿದ್ಯಾಲಯದ ಸಹಾಯಕ ಉಪನ್ಯಾಸಕರಾದ, ಡಾ. ಎ. ಎಲ್ ದೇಸಾಯಿ, ಇವರುಗಳು ಮಾತನಾಡಿ, ಪಂಚಾಕ್ಷರ ಗುರುಗಳ ಹೆಸರು ಉಳಿಸುವ ನಿಟ್ಟಿನಲ್ಲಿ, ಕಂಚಿನ ಪ್ರತಿಮೆ ಸ್ಥಾಪನೆ ಮತ್ತು ಧಾರವಾಡದಲ್ಲಿ ಮಾದರಿಯ ಆಶ್ರಮ ಸ್ಥಾಪಸಲು ಪ್ರಯತ್ನಿಸುತ್ತಿರುವ ಬಗ್ಗೆ ತಿಳಿಸಿದರು. ಡಾ. ಸುಮಾ ಬಸವರಾಜ ಹಡಪದ, ಹಳಿಯಾಳ ದೇವಿಕಾ ಜೋಗಿ ಹೊಸಪೇಟೆ, ಡಾ. ಸುರೇಶ ಕಳಸಣ್ಣವರ ಕಲಘಟಗಿ ವೇದಿಕೆಯಲ್ಲಿ ಇದ್ದರು.
ಧಾರವಾಡದ ಶ್ರೀಗುರು ಪುಟ್ಟರಾಜ ಸಂಗೀತ ಶಾಲೆ, ವೀರಶೈವ ಜಾಗೃತಿ ಮಹಿಳಾ ಸಮಿತಿ, ‘ಮಾಸ್ಟರ್’ ಸಾತ್ವಿಕ್ ಜಿ. ಮಹಾಮನೆ ಇವರುಗಳು ಸಂಗೀತ ನಮನ ಸಲ್ಲಿಸಿದರು. ಹುಬ್ಬಳಿಯ ಪ್ರೇರಣಾ ಸ್ಕೂಲ್ ಆಫ್ ಡ್ಯಾನ್ಸ್, ಧಾರವಾಡದ ಉಪಾಧ್ಯ ನೃತ್ಯ ವಿಹಾರ, ತಾಳಿಕೊಟೆಯ ಶ್ರೀ ವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ, ಮುಂಡರಗಿಯ ನಾಟ್ಯಬಿಂದು ಡ್ಯಾನ್ಸ್ ಅಕಾಡೆಮಿ, ಸಂಸ್ಥೆಯ ಶಿಷ್ಯರು ನೃತ್ಯ ನಮನ ಸಲ್ಲಿಸಿದರು.
ಡಾ. ಸುರೇಶ ಕಳಸಣ್ಣವರ ಕಲಘಟಗಿ ಇವರ ಅಧ್ಯಕ್ಷತೆಯಲ್ಲಿ, ಪಂಚಾಕ್ಷರ ಗವಾಯಿಗಳವರ ಕುರಿತು ಬರೆದ ಕವಿತಿಗಳ ಕವಿಗೋಷ್ಠಿಯಲ್ಲಿ ಮೃತ್ಯುಂಜಯ ಹಿರೇಮಠ, ಪ್ರೊ ಜಯಶ್ರೀ ಹಿರೇಮಠ, ಪದ್ಮಾ ಜೆ. ಕಬಾಡಿ, ವೀರಯ್ಯ ಸಂಕಿನಮಠ, ಬಸವರಾಜ ಹಡಪದ, ವಿಮಲಾ ಹುಬ್ಬಳ್ಳಿ, ಸಂಧ್ಯಾ ದೀಕ್ಷಿತ, ಸುಲೋಚನ ಮಾಲಿಪಾಟೀಲ್ರೇ, ಖಾ ಜೋಶಿ, ವೀರೇಶರಡ್ಡಿ ಟಿ. ಕಾಮರಡ್ಡಿ, ದಾನಮ್ಮ ವೀ ಅಂಗಡಿ, ಮಧುಮತಿ ಸಣಕಲ್, ಸೀತಾ ಛಪ್ಪರ, ಧಾರವಾಡ, ಶಾರದಾ ಕೆಲಸಂಗದ, ಶಾಂತಕ್ಕ ಹೊಂಬಳ, ಇಂದಿರಾ ಮೋಟೆಬೆನ್ನೂರ, ಇವರು ತಮ್ಮ ಕವನದ ಮೂಲಕ ಗುರು ಗುಣಗಾನ ಮಾಡಿದರು. ಶಶಿಕಲಾ ಅಕ್ಕಿ ಹಾವೇರಿ ಇವರು ಸ್ವಾಗತಿಸಿದರು. ಸುಧಾ ಕಬ್ಬೂರ ನಿರೂಪಣೆ ಮಾಡಿ ವಂದನಾರ್ಪಣೆ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.