ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಮಂಗಳವಾರ ಬೆಳಿಗ್ಗೆ ನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆ ಅವರೊಂದಿಗೆ ದಿಢೀರ ಭೇಟಿ ನೀಡಿ, ಕ್ರೀಡಾಂಗಣದ ಆವರಣ ಪರಿವೀಕ್ಷಣೆ ನಡೆಸಿದರು.
ಕ್ರೀಡಾಂಗಣದಲ್ಲಿ ಒದಗಿಸಿರುವ ಕ್ರೀಡಾ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ಕ್ರೀಡಾಂಗಣ ಸ್ವಚ್ಛತೆಯೂ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿರುವ ಮಾಹಿತಿ ಪಡೆದುಕೊಂಡು, ಈ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾಲಿಬಾಲ್, ಪುಟ್ಬಾಲ್, ಬಾಸ್ಕೆಟ್ ಬಾಲ್, ಅಥ್ಲೆಟಿಕ್ಸ್, ಹಾಕಿ ಅಸೋಷಿಯೇಶನ್ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಕ್ರೀಡಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕುರಿತು ಕುಂದುಕೊರತೆ ಸಭೆ ನಡೆಸಿದರು. ಕ್ರೀಡಾ ಇಲಾಖೆಯ ತರಬೇತಿದಾರರೊಂದಿಗೆ ಕ್ರೀಡಾ ತರಬೇತಿ ಹಾಗೂ ಸಾಧನೆಯ ಪ್ರಗತಿ ಕುರಿತು ವಿವರ ಪಡೆದುಕೊಂಡ ಅವರು,ಅಗತ್ಯ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ ಅವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

