ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಜುಲೈ ೧೩ ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇದ್ದ ಒಟ್ಟು ೧೩,೪೦೦ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು ಹಾಗೂ ೨,೧೯,೪೭೫ ವ್ಯಾಜ್ಯ ಪೂರ್ವ ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಗೊಂಡಿದೆ.
ಈ ಲೋಕ ಅದಾಲತ್‌ನಲ್ಲಿ ವಿವಿಧ ಕಾರಣಗಳಿಂದ ವಿಚ್ಚೇದನಕ್ಕೆ ಮೊರೆ ಹೋಗಿದ್ದ ಏಳು ದಂಪತಿಗಳನ್ನು ನ್ಯಾಯಾಧೀಶರು ಹಾಗೂ ವಕೀಲರ ಮಧ್ಯಸ್ಥಿಕೆಯಲ್ಲಿ ನಡೆದ ರಾಜಿ ಸಂಧಾನದಲ್ಲಿ ಮೂಲಕ ಒಂದಾಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಈ ರಾಷ್ಟ್ರೀಯ ಲೋಕ್ ಅದಾಲತನ ಯಶಸ್ಸಿಗೆ ಸಹಕರಿಸಿದ ಎಲ್ಲಾ ವಕೀಲರು, ಕಕ್ಷಿದಾರರು, ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮತ್ತು ರಾಷ್ಟ್ರೀಯ ಲೋಕ್ ಅದಾಲತ್ ಬಗ್ಗೆ ಪ್ರಚಾರದಲ್ಲಿ ಸಹಭಾಗಿಯಾದ ಎಲ್ಲರಿಗೂ ಪ್ರಧಾನ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹಾಗೂ ಸದಸ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಅಂಬಲಿ ಅವರು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

