Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಲಿತರ ಹಣ ತಿಂದ ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಪಾಪ ಹತ್ತಲಿದೆ
(ರಾಜ್ಯ ) ಜಿಲ್ಲೆ

ದಲಿತರ ಹಣ ತಿಂದ ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಪಾಪ ಹತ್ತಲಿದೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಅಭಿಮತ

ವಿಜಯಪುರ: ಚುನಾವಣೆ ಮುಗಿದ ನಂತರ ಜನರು ಹಾಗೂ ಕಾರ್ಯಕರ್ತರನ್ನು ಮರೆಯುತ್ತೇನೆಂಬ ಭಾವನೆ ಬೇಡ, ಸಾಯುವವರೆಗೂ ನಿಮ್ಮ ಜೊತೆಗೆ ಇರುತ್ತೇನೆಂದು ಸಂಸದ ರಮೇಶ ಜಿಗಜಿಣಗಿ ಭಾವುಕರಾಗಿ ನುಡಿದರು.
ಮಂಗಳವಾರ ನಗರದ ಸಾಯಿ ವಿಹಾರ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ, ನೂತನ ಸಂಸದರಿಗೆ ಸನ್ಮಾನ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಳೆದ ೪೫ ವರ್ಷಗಳಿಂದ ಜಿಲ್ಲೆಯಲ್ಲಿ ರಾಜಕೀಯದಲ್ಲಿ ಯಾರೊಂದಿಗೂ ಕೆಟ್ಟದಾಗಿ ವ್ಯವಹರಿಸದೇ ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂದರು.
ಚುನಾವಣೆ ಸಂದರ್ಭ ಯಾರಿಗೂ ಒಂದು ನಯಾಪೈಸೆ ಕೊಡದೆ ಪುಕ್ಸಟ್ಟೆಯಾಗಿ ನಿಮ್ಮ ಬಳಿ ಕೆಲಸ ಮಾಡಿಸಿಕೊಂಡಿದ್ದೇನೆಯಾದರೂ ಮುಂದಿನ ೫ ವರ್ಷಗಳ ಕಾಲ ನಿಮ್ಮ ಕೆಲಸವನ್ನು ಯಾರಿಂದಲೂ ಏನು ಅಪೇಕ್ಷೆ ಪಡದೇ ನಿಮ್ಮ ಕೆಲಸವನ್ನು ಪುಕ್ಸಟ್ಟೆಯಾಗಿ ಮಾಡಿ ಕೊಡುವುದಾಗಿ ಹೇಳಿದರು.
೨೦೦೪ ರಲ್ಲಿ ಬಿಜೆಪಿ ಸೇರಿದ ದಿನದಿಂದ ಇಂದಿನವರೆಗೂ ಪಕ್ಷಕ್ಕೆ ಪ್ರಾಮಾಣಿವಾಗಿದ್ದೇನೆ. ಆದರೆ ನನ್ನ ಅನುಭವ ಹಂಚಿಕೊಳ್ಳಲು ಪಕ್ಷದ ಮುಖಂಡರು ಮಾಡುತ್ತಿಲ್ಲ. ಅಧಿಕಾರದ ಬೇಕೆಂದು ಯಾರ ಮನೆಗೂ ಹೋಗಿಲ್ಲ. ಇಡೀ ದಕ್ಷಿಣ ಭಾರತದಲ್ಲಿ ಸತತವಾಗಿ ೭ ಬಾರಿ ದಲಿತ ಸಂಸದನಾಗಿ ಗೆದ್ದು ಬರುತ್ತಿದ್ದರೂ, ಈ ಬಾರಿಯ ಕೇಂದ್ರ ಸರ್ಕಾರದ ಮಂತ್ರಿ ಮಂಡಲದಲ್ಲಿ ಸ್ಥಾನ ಸಿಗಲಿಲ್ಲ. ಅದಕ್ಕೆ ರಾಜ್ಯ ಮುಖಂಡರು ನನ್ನ ಹೆಸರು ಹೇಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನೇನು ರಾಜ್ಯ ಸರ್ಕಾರ ಬಹಳ ದಿನ ಉಳಿಯಲ್ಲ. ದಲಿತರ ಹಣ ತಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಪಾಪ ಹತ್ತಲಿದೆ. ತಮ್ಮದೇನು ತಪ್ಪಿಲ್ಲದಿದ್ದರೆ ಹಗರಣವನ್ನು ಸಿಬಿಐಗೆ ಕೊಡಲಿ ಎಂದು ಸವಾಲು ಹಾಕಿದರು.
ರಾಜ್ಯ ಉಪಾಧ್ಯಕ್ಷ ಮಾಜಿ ಶಾಸಕ ಅನಿಲ ಬೆನಕೆ ಮಾತನಾಡಿ, ಮುಂಬರುವ ಜಿಲ್ಲಾ ಪಂಚಾಯತಿ,ತಾಲೂಕಾ ಪಂಚಾಯತಿ ಚುನಾವಣೆ ನಡೆಯಲಿದ್ದು, ಜಿಲ್ಲೆಯ ಎಲ್ಲ ಕಾರ್ಯಕರ್ತರು ತಯಾರಿಗೆ ಸಿದ್ಧರಾಗೋಣ ಎಂದು ಕರೆ ನೀಡಿದರು.
ಜಿಲ್ಲಾಧ್ಯಕ್ಷ ಆರ್.ಎಸ್.ಪಾಟಿಲ ಕೂಚಬಾಳ ಮಾತನಾಡಿ, ಹಿಂದುತ್ವದ ಬಗ್ಗೆ ಟೀಕಿಸಿದರುವ ರಾಹುಲ ಗಾಂಧಿ ಮಾನಸಿಕ ಸ್ಥಿತಿ ಸರಿಯಿಲ್ಲ. ಅವರಿಗೆ ಕೇವಲ ಅಧಿಕಾರದ ದಾಹ ತುಂಬು ತುಳುಕುತ್ತಿದೆ. ಪ್ರಧಾನಿ ಮೋದಿ ಈಗ ಭಾರತಕ್ಕೆ ಅಷ್ಟೇ ಅಲ್ಲ ವಿಶ್ವಕ್ಕೆ ಬೇಕಾಗಿದ್ದಾರೆ. ಅವರಿಂದಲೇ ಶಾಂತಿ ನೆಲಸಲು ಸಾಧ್ಯ ಎಂದು ವಿಶ್ವದ ನಾಯಕರಿಗೆ ತಿಳಿದಿದೆ ಎಂದರು.
ರಾಜ್ಯದ ಸರ್ಕಾರದ ಸಾಲು-ಸಾಲು ಹಣರದಲ್ಲಿ ಮುಳುಗಿದೆ. ಸಚಿವರ ಬಂಧನವಾಗಿದೆ. ಮುಖ್ಯಮಂತ್ರಿಗಳ ಬಂಧನವಾಗೂವರೆಗೂ ಹೋರಾಟ ನಿಲ್ಲಲ್ಲ. ಮುಂದೆ ಯಾವಾಗ ಬೇಕಾದರೂ ವಿಧಾನಸಭೆ ಚುನಾವಣೆ ನಡೆದರೂ ಅಚ್ಚರಿಯಿಲ್ಲ. ಅದಕ್ಕೆ ಕಾರ್ಯಕರ್ತರು ಈಗಲೇ ಸಿದ್ಧಗೊಳ್ಳಬೇಕೆಂದು ಹೇಳಿದರು.
ವೇದಿಕೆಯ ಮೇಲೆ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ, ರಮೇಶ ಭೂಸನೂರ, ಅರುಣ ಶಹಾಪುರ ಸಂಜೀವ ಐಹೊಳೆ, ವಿಜಯಕುಮಾರ ಪಾಟೀಲ, ಚಂದ್ರಶೇಖರ ಕವಟಗಿ, ಉಮೇಶ ಕಾರಜೋಳ, ಕಾಸುಗೌಡ ಬಿರಾದಾರ ಗೋಪಾಲ ಘಟಕಾಂಬಳೆ, ಸಪ್ನಾ ಕಣ್ಮುಚ್ಚಿನಾಳ ಮುಳುಗೌಡ ಪಾಟೀಲ, ಈರಣ್ಣ ರಾವೂರ, ಸಾಬು ಮಾಶಾಳ ವಿವೇಕಾನಂದ ಡಬ್ಬಿ, ಸಿದ್ಧಗೊಂಡ ಬಿರಾದಾರ, ಚಂದ್ರಶೇಖರ ಪಾಟೀಲ ಸೇರಿದಂತೆ ಪದಾಧಿಕಾರಿಗಳು, ಪಾಲಿಕೆ ಸದಸ್ಯರು ಕಾರ್ಯಕರ್ತರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.