ವಿಜಯಪುರ: ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದ ನಿಗಮದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ ಕಾನೂನು ಶಿಸ್ತು ಕ್ರಮ ಜರುಗಿಸಿ ಮರಳಿ ನಿಗಮಕ್ಕೆ ವಿನಿಯೋಗ ಮಾಡಬೇಕು,
ಪ್ರತಿ ವರ್ಷ ಸರಕಾರದ ವತಿಯಿಂದ ಪ. ಜಾತಿ /ಪ. ಪಂಗಡ ಸಮುದಾಯದ ಜನರಿಗೆ ಅಂಬೇಡ್ಕರ್ ಅವರ ನಿಗಮದಿಂದ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆಗಳು ಒಳಗೊಂಡ ಅರ್ಜಿ ಕರೆಯಲಾಗುತ್ತದೆ. ಪ್ರತಿ ವರ್ಷ ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತಾಗಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡದ ವಾಲ್ಮೀಕಿ ರಾಜ್ಯ ಯುವ ಘಟಕದ ಜಿಲ್ಲಾಧ್ಯಕ್ಷರಾದ ಅಮರೇಶ್ ಉಪ್ಪಳದ್ದಿನಿಯವರು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.
ವಾಲ್ಮೀಕಿ ನಿಗಮದಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರವಾಗಿದೆ ಅಧಿಕಾರಿಗಳು ಮತ್ತು ರಾಜಕಾರಣಿಗಳು ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ನಿಗಮ ಇರುವದು ಬಡಜನರ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಸಿಗುವ ಅನುದಾನ ತುಂಬಾ ಕಡಿಮೆ ಮಾಡಲಾಗಿದೆ ಅನುದಾನದಲ್ಲಿ ಕನಿಷ್ಠ20% ರೆಷ್ಟು ಜನರಿಗೆ ತಲುಪುತ್ತಿಲ್ಲ. ಒಂದು ಯೋಜನೆಯ ಫಲಾನುಭವಿ ಪಡೆಯಬೇಕಾದರೆ ಎರಡರಿಂದ ಮೂರು ವರ್ಷ ನಿಗಮಗಳಿಗೆ ಅಲಿಯಬೇಕಾಗಿದೆ ಇಂತಹ ಸ್ಥಿತಿಯಲ್ಲಿ ಅಧಿಕಾರಿಗಳು ಮತ್ತು ಕೆಲ ರಾಜಕಾರಣಿಗಳು ಭ್ರಷ್ಟಾಚಾರವೆಸಗಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದು ಅಂಥಹ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಕೊಡಬೇಕು. ಪ್ರಸ್ತುತ ಬೇಡಿಕೆ ಈಡೇರದಿದ್ದರೆ ರಾಜ್ಯದಾದಂತ ಹಿಂದುಳಿದ ಸಮುದಾಯಗಳ ನೇತೃತ್ವದಲ್ಲಿ ವಿಧಾನಸೌಧವನ್ನು ಮುತ್ತಿಗೆ ಹಾಕುವ ಮೂಲಕ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ದಯವಿಟ್ಟು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಹೇಳಿದರು.
Subscribe to Updates
Get the latest creative news from FooBar about art, design and business.
ವಾಲ್ಮೀಕಿ ಅಭಿವೃದ್ಧಿ ನಿಗಮ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
Related Posts
Add A Comment

