Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮದ್ಯವರ್ಜನ ಶಿಬಿರ ಮದ್ಯವ್ಯಸನಿಗಳಿಗೆ ವರದಾನ :ಸಂಗನಬಸವ ಶ್ರೀ
(ರಾಜ್ಯ ) ಜಿಲ್ಲೆ

ಮದ್ಯವರ್ಜನ ಶಿಬಿರ ಮದ್ಯವ್ಯಸನಿಗಳಿಗೆ ವರದಾನ :ಸಂಗನಬಸವ ಶ್ರೀ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಸುಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಮದ್ಯವ್ಯಸನಿಗಳನ್ನು ಮದ್ಯದಿಂದ ದೂರಮಾಡುವ ಸದುದ್ದೇಶದಿಂದ ವಿನೂತನವಾಗಿ ಮದ್ಯವರ್ಜನ ಶಿಬಿರವನ್ನು ಆಯೋಜನೆ ಮಾಡುವ ಮೂಲಕ ಮದ್ಯವ್ಯಸನಿಗಳು ಮದ್ಯದಿಂದ ದೂರ ಮಾಡುವಂತೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಹೇಳಿದರು.
ತಾಲೂಕಿನ ಯರನಾಳ ಗ್ರಾಮದ ವಿರಕ್ತಮಠದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ,ಧರ್ಮಸ್ಥಳದ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಒಂದು ವಾರ ಕಾಲ ಹಮ್ಮಿಕೊಂಡಿರುವ ೧೮೨೩ ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಶಿಬಿರವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಇದುವರೆಗೂ ಯಾರೂ ಮಾಡದೇ ಇರುವ ವಿಶೇಷವಾದ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಮಾಡುವ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ. ಮದ್ಯಪಾನದಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಈ ಚಟದಿಂದ ವ್ಯಕ್ತಿ ಮುಕ್ತಿ ಹೊಂದಿದರೆ ಮಾತ್ರ ಅವನು ತನ್ನ ಕುಟುಂಬದೊಂದಿಗೆ ನೆಮ್ಮದಿಯ ಜೀವನ ನಡೆಸಬಹುದು. ಈ ಶಿಬಿರದ ಸದುಪಯೋಗವನ್ನು ಮದ್ಯವ್ಯಸನಿಗಳು ಪಡೆದುಕೊಳ್ಳಬೇಕೆಂದ ಅವರು, ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಅವರು ತಮ್ಮ ಸಂಸ್ಥೆಯ ಮೂಲಕ ಸಮುದಾಯದ ಕಾರ್ಯಕ್ರಮ, ಸಾಂಸ್ಕ್ರತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ, ಜನರಲ್ಲಿ ಅರಿವು, ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಮಾತನಾಡಿ, ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮವಾಗಿದೆ. ಎಲ್ಲರ ಸಹಕಾರದೊಂದಿಗೆ ಈ ಶಿಬಿರವನ್ನು ಹಮ್ಮಿಕೊಂಡಿದೆ ಎಂದ ಅವರು, ಮದ್ಯಪಾನ ಎಂಬುವದು ಸಮಾಜವನ್ನು ಬಾಧಿಸುತ್ತಿದೆ. ಜಾಗೃತೆ ತಪ್ಪಿದರೆ ಯಾರನ್ನೂ ಬಿಡದ ಕಾಯಿಲೆ. ಮದ್ಯಾಪಾನಕ್ಕೆ ಜಾತಿ, ಧರ್ಮ, ಪಕ್ಷ ಎಂಬ ಬೇಧ-ಭಾವವಿಲ್ಲ. ಈ ಶಿಬಿರದ ಸದುಪಯೋಗವನ್ನು ಎಲ್ಲರೂ ಪಡೆದುಕೊಂಡು ಮದ್ಯಪಾನದಿಂದ ಮುಕ್ತರಾಗಬೇಕೆಂದರು.
ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಮದ್ಯಪಾನದಿಂದ ಅನೇಕ ಕುಟುಂಬಗಳು ನೆಮ್ಮದಿ ಕಳೆದುಕೊಂಡಿವೆ. ಮದ್ಯಪಾನದಿಂದ ಮುಕ್ತವಾಗಬೇಕಾದರೆ ಇಂತಹ ಶಿಬಿರದಲ್ಲಿ ಭಾಗವಹಿಸುವ ಮೂಲಕ ಮದ್ಯಪಾನ ತ್ಯಜಿಸಬಹುದು. ಮದ್ಯಪಾನದಿಂದ ಮುಕ್ತರಾದರೆ ಉತ್ತಮ ಜೀವನ ತಮ್ಮದಾಗಿಸಿಕೊಳ್ಳಬಹುದು ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಗೌಡ ಪಾಟೀಲ ಮಾತನಾಡಿ, ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಇದನ್ನು ಅರಿತುಕೊಂಡು ನಾವು ಮುನ್ನಡೆಯಬೇಕಿದೆ. ಈ ಶಿಬಿರವನ್ನು ಹಮ್ಮಿಕೊಂಡಿರುವುದ ಒಳ್ಳೆಯ ಕಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸವರಾಜ ಬ್ಯಾಕೋಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ರಾಜೇಶ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ನಂದಕುಮಾರ, ರಂಜಿತಾ, ಯರನಾಳ ಗ್ರಾಪಂ ಅಧ್ಯಕ್ಷೆ ಶಾಂತವ್ವ ಕೋಲಕಾರ, ತಾಪಂ ಮಾಜಿ ಸದಸ್ಯೆ ರತ್ನಾಬಾಯಿ ಬಿಜಾಪುರ, ಮುಖಂಡರಾದ ಶಿವನಗೌಡ ಗುಜಗೊಂಡ, ಡಾ.ಅಮರೇಶ ಮಿಣಜಗಿ, ಸಾವಿತ್ರಿ ಕಲ್ಯಾಣಶೆಟ್ಟಿ, ಪರಶುರಾಮ ಜಮಖಂಡಿ, ಸವಿತಾ ಪೂಜಾರಿ, ಚನ್ನಪ್ಪಗೌಡ ಪಾಟೀಲ, ಗುಂಡಪ್ಪಗೌಡ ಬಿರಾದಾರ, ಚನ್ನಬಸು ಚಿಮ್ಮಲಗಿ ಇತರರು ಇದ್ದರು.
ಧರ್ಮಸ್ಥಳ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಪ್ರವೀಣ ಆಚಾರ್ಯ ಸ್ವಾಗತಿಸಿದರು. ಮೇಲ್ವಿಚಾರಕಿ ಶ್ರೀದೇವಿ ನಿರೂಪಿಸಿದರು. ಮೇಲ್ವಿಚಾರಕಿ ಕೋಮಲ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.