Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಧಾನಸಭೆಯಲ್ಲಿ ಕೋಲಾಹಲ! :ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
(ರಾಜ್ಯ ) ಜಿಲ್ಲೆ

ವಿಧಾನಸಭೆಯಲ್ಲಿ ಕೋಲಾಹಲ! :ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಾಲ್ಮೀಕಿ ನಿಗಮದ ಹಗರಣ | ಲೂಟಿಗೆ ಕಾಂಗ್ರೆಸ್ ಸರ್ಕಾರವೇ ಹೊಣೆ | ಶೋಷಿತ ಸಮುದಾಯದ ಹಣ ಲೂಟಿ | ವಿಪಕ್ಷ ನಾಯಕ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನವಾದ ಮಂಗಳವಾರವೂ ವಿಧಾನಸಭೆಯಲ್ಲಿ ಗದ್ದಲ ಮುಂದುವರಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಲೂಟಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದ ಪ್ರತಿಪಕ್ಷ ನಾಯಕ ಆರ್ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಗಳ ಅಧೀಕ್ಷಕ ಚಂದ್ರಶೇಖರ್ ಪಿ ಅವರ ಸಾವಿಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿದ ಆರ್ ಅಶೋಕ್, ಒಂದು ವೇಳೆ ಈ ಆತ್ಮಹತ್ಯೆ ನಡೆಯದಿದ್ದರೆ ಹಗರಣವೇ ಹೊರ ಬರುತ್ತಿರಲಿಲ್ಲ. ಇದರ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಎಷ್ಟು ನ್ಯಾಯಯುತವಾಗಿದೆ ಎಂದು ಪ್ರಶ್ನಿಸಿದರು.
ಎಸ್ಟಿ(ಪರಿಶಿಷ್ಟ ಪಂಗಡ) ಸಮುದಾಯದ ಕಲ್ಯಾಣಕ್ಕೆ ನೀಡಬೇಕಿದ್ದ 187 ಕೋಟಿ ರೂ.ಗಳನ್ನು ಲೂಟಿ ಮಾಡಿ ತೆಲಂಗಾಣಕ್ಕೆ ಕೊಂಡೊಯ್ದಿರುವುದರಿಂದ ಅವರಿಗೆ ಸಲ್ಲಬೇಕಾದ ಸವಲತ್ತುಗಳು ಸಿಕ್ಕಿಲ್ಲ. ಆ ಹಣವನ್ನು ಎಸ್ಟಿ ಸಮುದಾಯದ ಫಲಾನುಭವಿಗಳಿಗೆ ಸಿಎಂ ನೀಡಬೇಕು. 224 ಕ್ಷೇತ್ರದ ಮತದಾರರಿಗೆ ತಲುಪಬೇಕಾದ ಹಣ ದುರ್ಬಳಕೆಯಾಗಿದೆ. ದಲಿತರ ಬದುಕಿಗೆ ಸರ್ಕಾರ ಕೊಳ್ಳಿ ಇಟ್ಟಿದೆ. ಶೋಷಿತ ಸಮುದಾಯದ ಹಣ ಲೂಟಿಯಾಗಿದೆ ಎಂದು ಪ್ರತಿಪಕ್ಷ ನಾಯಕ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಅವರಿಗೆ ಹಾಗೂ ಸಚಿವರಿಗೆ ವಿನಂತಿ ಮಾಡುತ್ತೇನೆ. ಎಸ್​ಟಿ ಜನಾಂಗದವರ ಮನೆಯಲ್ಲಿ ಒಂದು ದಿನ ವಾಸ್ತವ್ಯ ಮಾಡಿ, ಅವರ ಕಷ್ಟ, ಗೋಳು ನಿಮಗೆ ಗೊತ್ತಾಗುತ್ತದೆ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರ ಕುಟುಂಬ ಬೀದಿಗೆ ಬಂದಿದೆ. ಸಚಿವರಾದ ಮಧು ಬಂಗಾರಪ್ಪ ಹಾಗೂ ಪರಮೇಶ್ವರ್ ಅವರು ಸಾಂತ್ವನ ಹೇಳಿದ್ದಾರೆ. ಮತ್ತ್ಯಾರೂ ಬಂದಿಲ್ಲ ಎಂದು ಚಂದ್ರಶೇಖರ್ ಕುಟುಂಬದವರು ಹೇಳಿದ್ದಾರೆ. ಜೀವ ಒತ್ತೆಯಿಟ್ಟಾದರೂ ನ್ಯಾಯ ಪಡೆಯುವುದಾಗಿ ಚಂದ್ರಶೇಖರ್ ಅವರ ಪತ್ನಿ ಹೇಳಿದ್ದಾರೆ. ಅನ್ಯಾಯವಾಗಿ ಅಮಾಯಕರ ಸಾವಾಗಿದೆ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿರುವುದನ್ನು ಸಿಎಂ ಅವರೇ ಒಪ್ಪಿಕೊಂಡಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ಅಥವಾ ಹಣಕಾಸು ಇಲಾಖೆ ಅಥವಾ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಅಶೋಕ್ ಹೇಳಿದರು.
ಹಗರಣದ ಬಗ್ಗೆ ತಮಗೆ ತಿಳಿದಿಲ್ಲ ಎಂದು ಸಿಎಂ ಹೇಳಿದ್ದಾರೆ. ಹಗರಣ ಬೆಳಕಿಗೆ ಬಂದು 40 ದಿನಗಳು ಕಳೆದರೂ ಎಸ್‌ಐಟಿ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷರಾಗಿರುವ ಆಡಳಿತಾರೂಢ ಕಾಂಗ್ರೆಸ್‌ ಶಾಸಕ ಬಸನಗೌಡ ದದ್ದಲ್‌ ಅವರಿಗೆ ಏಕೆ ನೋಟಿಸ್‌ ನೀಡಿಲ್ಲ ಎಂದು ಅಶೋಕ್ ಪ್ರಶ್ನಿಸಿದರು.
ಮುಖ್ಯಮಂತ್ರಿಗಳು ಹಣಕಾಸು ಖಾತೆಯನ್ನು ಹೊಂದಿದ್ದಾರೆ. ಹೀಗಾಗಿ ಹಣ ಮಂಜೂರಾಗುವುದು, ಹಣ ಖರ್ಚಾಗುವುದು ಎಲ್ಲದರ ಮಾಹಿತಿ ಇರುತ್ತದೆ. ಮಾಹಿತಿ ಇಲ್ಲದಿದ್ದರೆ ಕೇಳಬೇಕಲ್ಲವೇ? ಆ ಇಲಾಖೆಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಯೂ ಮಾತನಾಡಲಿಲ್ಲ ಎಂದು ಟೀಕಿಸಿದರು.
ಚರ್ಚೆಯ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, 187 ಕೋಟಿ ರೂ.ಗಳ ಹಗರಣದ ಬಗ್ಗೆ ಹಣಕಾಸು ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂಬುದು ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ಶೋಷಿತ ದೀನದಲಿತರಿಗಾಗಿ ಶ್ರಮಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ದಲಿತರ ಹಣವನ್ನೇ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.
ವಿಜಯೇಂದ್ರ ಹೇಳಿಕೆಗೆ ಸಚಿವರು ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.


” ಮೂರು ಏಜೆನ್ಸಿಗಳು ಸಿಬಿಐ, ಇಡಿ ಮತ್ತು ಈಗ ನಮ್ಮ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ನಡೆಸುತ್ತಿರುವಾಗ ವಿಧಾನಸಭೆಯಲ್ಲಿ ಪ್ರಕರಣದ ಕುರಿತು ನಿಲುವಳಿ ಸೂಚನೆ ಮಂಡಿಸಬಾರದಿತ್ತು. ಪ್ರಕರಣದಲ್ಲಿ ಯಾವುದೇ ಸಚಿವರು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ನಾವು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ.”

– ಜಿ.ಪರಮೇಶ್ವರ
ಗೃಹ ಸಚಿವರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.