Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಮದಾಪುರ ಮೀಸಲು ಅರಣ್ಯ ಪ್ರದೇಶಕ್ಕೆ ಸಿದ್ದೇಶ್ವರ ಶ್ರೀಗಳ ಹೆಸರಿಡಿ
(ರಾಜ್ಯ ) ಜಿಲ್ಲೆ

ಮಮದಾಪುರ ಮೀಸಲು ಅರಣ್ಯ ಪ್ರದೇಶಕ್ಕೆ ಸಿದ್ದೇಶ್ವರ ಶ್ರೀಗಳ ಹೆಸರಿಡಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮರು ನಾಮಕರಣಕ್ಕೆ ಸಚಿವ ಎಂ.ಬಿ.ಪಾಟೀಲರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ 624 ಹೆಕ್ಟೆರ್ ಮೀಸಲಿಟ್ಟ ಅರಣ್ಯ ಪ್ರದೇಶಕ್ಕೆ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮೀಸಲು ಅರಣ್ಯ ಪ್ರದೇಶವೆಂದು ಮರುನಾಮಕರಣ ಮಾಡಬೇಕೆಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲರವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನರವರಿಗೆ ಮನವಿ ಸಲ್ಲಿಸಿದ್ದಾರೆ.
ವಿಜಯಪುರ ಜಿಲ್ಲೆಯ ಮಮದಾಪುರ ಗ್ರಾಮದಲ್ಲಿ ‘ಆದಿಲ್‍ಶಾಹಿ’ ಸುಲ್ತಾನರ ಕಾಲದ ಇತಿಹಾಸ ಪ್ರಸಿದ್ದ ದೊಡ್ಡ ಕೆರೆ, ಸಣ್ಣಕೆರೆಗಳ ನೀರಿನ ಪಾತ್ರದಲ್ಲಿರುವ ಇದು ವಿಜಯಪುರ ಜಿಲ್ಲೆಯ ಏಕೈಕ ಕಾಯ್ದಿಟ್ಟ ‘624 ಹೆಕ್ಟೆರ್’ ಮೀಸಲು ಅರಣ್ಯ ಪ್ರದೇಶವಿದೆ. ಇದು ಈ ಪ್ರದೇಶಕ್ಕೆ ಮುಕುಟಪ್ರಾಯವಾಗಿದೆ.
ಕಳೆದ ಮೂರು ವರ್ಷಗಳಿಂದ ಕೂಡಗಿ ಎನ್.ಟಿ.ಪಿ.ಸಿ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಇಲ್ಲಿ ಹೊಂಗೆ, ಬೇವು, ಅರಳಿ, ಆಲ, ಹತ್ತಿ, ಬಸರಿ, ನೆರಳೆ, ಶ್ರೀಗಂಧ, ಹುಣಸೆ ಅಲ್ಲದೇ ಬಗೆ-ಬಗೆಯ ಹಣ್ಣಿನ ಸಸಿಗಳನ್ನು ನೆಟ್ಟು, ಪೋಷಿಸಲಾಗುತ್ತಿದೆ. ಸದ್ಯ ಈ ಗಿಡಗಳು ಸೊಂಪಾಗಿ ಬೆಳೆದು ಹಸಿರು ಹೊದಿಕೆಯಂತಾಗಿದೆ. ಜೀವ ವೈವಿಧ್ಯ ತಾಣವಾಗುವ ಹಂತದಲ್ಲಿದೆ.
ಅನಂತದಲ್ಲಿ ಅನಂತರಾಗಿ ಉಳಿದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳು ತಮ್ಮ ಅಂತಿಮ ಅಭಿವಂದನಾ ಪತ್ರದಲ್ಲಿ ತಿಳಿಸಿದಂತೆ, “ತಮಗಾಗಿ ಯಾವುದೇ ಸ್ಮಾರಕಗಳನ್ನು ನಿರ್ಮಿಸದೆ, ನಿಸರ್ಗದಲ್ಲಿಯೇ ಒಂದಾಗಿದ್ದಾರೆ”. ಇಂತಹ ಪೂಜ್ಯನೀಯರ ವಿಚಾರಗಳನ್ನು ಅವರ ಆಶಯದಂತೆ ನಡೆದುಕೊಳ್ಳುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಅದರಂತೆ ಮಾನ್ಯ ಮುಖ್ಯಮಂತ್ರಿಗಳು ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳ ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀಗಳ ನೆನಪಿನಲ್ಲಿ ಒಂದು ಸಾವಿರ ಎಕರೆ ಅರಣ್ಯ ಪ್ರದೇಶವನ್ನು ಅಭಿವೃದ್ಧಿಪಡಿಸಲು ಘೋಷಣೆ ಮಾಡಿದ್ದಾರೆ. ಸರ್ಕಾರದ ಈ ಆಶಯ ಮತ್ತು ಘೋಷಣೆಯಂತೆ ಮಮದಾಪುರ ಅರಣ್ಯ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
ಸದರಿ ಮಮದಾಪುರ ಮೀಸಲು ಅರಣ್ಯ ಪ್ರದೇಶವನ್ನು ಸಿದ್ದೇಶ್ವರ ಶ್ರೀಗಳ ಮೀಸಲು ಅರಣ್ಯ ಪ್ರದೇಶವೆಂದು ಮರುನಾಮಕರಣ ಮಾಡುವುದರಿಂದ ಸರ್ಕಾರದ ಘೋಷಣೆ ಈಡೇರುವವುದರ ಜೊತೆಗೆ ಸಿದ್ದೇಶ್ವರ ಶ್ರೀಗಳಿಗೆ ನಮನವನ್ನು ಸಲ್ಲಿಸಿದಂತಾಗುತ್ತದೆ ಮತ್ತು ಜನರಲ್ಲಿ ಈ ಅರಣ್ಯದ ಬಗ್ಗೆ ಪೂಜ್ಯ ಭಾವನೆ ಮೂಡುತ್ತದೆ.
ಮಮದಾಪುರ ಮೀಸಲು ಅರಣ್ಯ ಪ್ರದೇಶವನ್ನು ‘ಶ್ರೀ ಸಿದ್ದೇಶ್ವರ ಸ್ವಾಮೀಜಿ ಮೀಸಲು ಅರಣ್ಯ’ ಎಂದು ಮರುನಾಮಕರಣ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಇಂದು ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿ ವಿನಂತಿಸಿದ್ದಾರೆ.
ಈ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅರಣ್ಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.