Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪವಿತ್ರ ತೀರ್ಥಕ್ಷೇತ್ರ ಪಂಢರಪುರದಲ್ಲಿ ಆಷಾಢ ಏಕಾದಶಿ ಸಡಗರ
(ರಾಜ್ಯ ) ಜಿಲ್ಲೆ

ಪವಿತ್ರ ತೀರ್ಥಕ್ಷೇತ್ರ ಪಂಢರಪುರದಲ್ಲಿ ಆಷಾಢ ಏಕಾದಶಿ ಸಡಗರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಲ್ನಡಿಗೆಯಲ್ಲಿ ಬಂದ ಲಕ್ಷಾಂತರ ಭಕ್ತರು | ವಿಠ್ಠಲ-ರುಕ್ಮಿಣಿ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

– ಸಿದ್ರಾಮ ಮಾಳಿ
ವಿಜಯಪುರ: ಮಹಾರಾಷ್ಟ್ರದಲ್ಲಿರುವ ಪವಿತ್ರ ತೀರ್ಥಕ್ಷೇತ್ರ ಪಂಢರಪುರದಲ್ಲಿ ಬುಧವಾರದಂದು ಆಷಾಢ ಏಕಾದಶಿಯ ಸಡಗರ ಮನೆ ಮಾಡಿತ್ತು. ವಿಠ್ಠಲನ ಅವತಾರದಲ್ಲಿ ನೆಲೆಸಿರುವ ವಿಷ್ಣುವಿನ ದರ್ಶನ ಪಡೆದು ಪಾದ ಸ್ಪರ್ಶಿಸಲು ದೇಶದ ವಿವಿಧ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಕಾಲ್ನಡಿಗೆಯಲ್ಲಿ ಆಗಮಿಸಿದ್ದರು.
ಸಂಪ್ರದಾಯದಂತೆ ಮಹಾರಾಷ್ಟ್ರ ಸರ್ಕಾರದ ಪ್ರಥಮ ಪೂಜೆಯನ್ನು ಮುಖ್ಯಮಂತ್ರಿ ಏಕನಾಥ ಶಿಂಧೆ ದಂಪತಿ ನೆರವೇರಿಸಿದರು. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತೆಲಂಗಾಣ ರಾಜ್ಯಗಳ ಲಕ್ಷಾಂತರ ಭಕ್ತರು ಪಂಢರಪುರಕ್ಕೆ ಆಗಮಿಸಿ, ಇಲ್ಲಿನ ಚಂದ್ರಭಾಗ ನದಿಯಲ್ಲಿ ಸ್ನಾನ ಮಾಡಿ ವಿಠಲನ ದರ್ಶನ ಪಡೆದರು. ತುಳಸಿ ಮಾಲೆ ಧರಿಸಿದ ಸಂತರು, ತಲೆಯ ಮೇಲೆ ತುಳಸಿಕಟ್ಟೆ ಹೊತ್ತು, ಹೆಚ್ಚೆ ಹಾಕುತ್ತಾ ಕೈ ಕೈ ಹಿಡಿದುಕೊಂಡು ಕುಣಿದು ಸಂಭ್ರಮಿಸಿ ಪಂಢರಿನಾಥನಿಗೆ ಜೈಕಾರ ಹಾಕಿದರು.
ಪಂಢರಪುರದ ಪ್ರಮುಖ ಬೀದಿಗಳಲ್ಲಿ ಸಂಜೆ ವಿಠಲ-ರುಕ್ಮಿಣಿ ಪಲ್ಲಕ್ಕಿ ಉತ್ಸವ ನಡೆಯಿತು. ಏಕಾದಶಿ ಅಂಗವಾಗಿ ವಾರಕಾರಿ ಸಪ್ತಾಹ ಜರುಗಿತು. ಅಭಂಗಗಳನ್ನು ಹಾಡುತ್ತಾ ಕುಣಿಯುತ್ತ ಭಜನೆ, ನಾಮ ಸಂಕೀರ್ತನೆಗಳಲ್ಲಿ ಭಕ್ತರು ಮೈಮರೆತರು. ಲಕ್ಷೋಪಲಕ್ಷ ಭಕ್ತರು ಪಾದಯಾತ್ರೆ, ವಾಹನಗಳ ಮೂಲಕ ವಿಠಲನ ಸನ್ನಿಧಿಗೆ ಆಗಮಿಸಿದ್ದ ಹಿನ್ನಲೆಯಲ್ಲಿ ಪಂಢರಪುರದಲ್ಲಿ ಸಂಚಾರ ದಟ್ಟಣೆ ಅಧಿಕವಾಗಿತ್ತು. ದೇವಾಸ್ಥಾನದಲ್ಲಿ ವಿಠಲನ ದರ್ಶನಕ್ಕೆ ಭಕ್ತರು ಮುಗಿಬಿದ್ದ ಹಿನ್ನಲೆಯಲ್ಲಿ ನೂಕುನುಗ್ಗಲು ಉಂಟಾಯಿತು. ಭಕ್ತರನ್ನು ನಿಯಂತ್ರಿಸಲು ಪೊಲೀಸ್‌ರು ಹಾಗೂ ಸ್ವಯಂ ಸೇವಕರು ಹರಸಾಹಸ ಪಟ್ಟರು.
ಯಾತ್ರಿಕರಿಗೆ ಉಚಿತ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಚಂದ್ರಭಾಗ ನದಿ ತೀರದಲ್ಲಿ ಭಕ್ತರು ಪುಣ್ಯಸ್ನಾನ ಮಾಡಲು ವ್ಯವಸ್ಥೆ ಕಲ್ಪಿಸಲಾಗಿತ್ತು. ಭಕ್ತರು ಸಿಹಿ-ತಿನಿಸು, ವಿಠಲ-ರುಕ್ಮಿಣಿಯರ ಮೂರ್ತಿ, ಪೂಜಾ ಸಾಮಾಗ್ರಿ, ಮಕ್ಕಳ ಆಟಿಕೆಗಳನ್ನು ಖರೀದಿಸಿದರು. ವ್ಯಾಪಾರ, ವಹಿವಾಟು ಜೋರಾಗಿತ್ತು.
ಹಿನ್ನಲೆ: ಕರ್ನಾಟಕದ ನೆರೆಯ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿರುವ ಪವಿತ್ರ ಕ್ಷೇತ್ರದಲ್ಲಿ ವಿಠ್ಠಲನ ಪಾದ ದರ್ಶನಕ್ಕೆ ಮಹಾರಾಷ್ಟ್ರದಲ್ಲಿಯೇ ಅತಿ ಹೆಚ್ಚು ಭಕ್ತರು ಭೇಟಿ ನೀಡುವ ಪವಿತ್ರ ಸ್ಥಳವಾಗಿರುವ ಐತಿಹಾಸಿಕ ದೇಗುಲಕ್ಕೆ ಸುಮಾರು ೮೦೦ ವರ್ಷಗಳಿಂದಲೂ ಭಕ್ತರು ಕಾಲ್ನಡಿಗೆಯಲ್ಲಿ ತೀರ್ಥಯಾತ್ರೆ ಕೈಗೊಳ್ಳುತ್ತಾ ಬಂದಿದ್ದಾರೆ. ಹೀಗಾಗಿ ಆಷಾಢ ಏಕಾದಶಿ ಪಂಢರಪುರದಲ್ಲಿ ಒಂದು ದೊಡ್ಡ ಜಾತ್ರೆ.
ಸೋಲಾಪುರ ಜಿಲ್ಲೆಯಲ್ಲಿರುವ ಚಂದ್ರಭಾಗ ನದಿ ದಡದಲ್ಲಿರುವ ಪಂಢರಪುರದಲ್ಲಿರುವ ವಿಠ್ಠಲ ದೇವಾಲಯವು ವೈಷ್ಣವರ ಪವಿತ್ರ ಕ್ಷೇತ್ರವಾಗಿದೆ. ಇಲ್ಲಿ ವಿಷ್ಣುವನ್ನು ವಿಠ್ಠಲ ಅಥವಾ ಪಾಂಡುರಂಗ ರೂಪದಲ್ಲಿ ಆರಾಧಿಸಲಾಗುತ್ತದೆ. ಇದು ಕೃಷ್ಣ ಅಥವಾ ವಿಷ್ಣುವಿನ ಪುನರ್ಜನ್ಮ ಎಂದು ನಂಬಲಾಗಿದೆ.
ಪಂಢರಾಪುರದಲ್ಲಿ ಭಗವಂತನಾದ ವಿಷ್ಣು; ವಿಠ್ಠಲ ಅಥವಾ ವಿಠೋಬಾ ಅವತಾರದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾನೆ. ಭಾರತದಲ್ಲಿ ವೈಷ್ಣವರ ಪ್ರಮುಖ ಆರಾಧಾನಾ ಕ್ಷೇತ್ರವಿದು. ಇಲ್ಲಿನ ವಿಶೇಷವೆಂದರೆ, ಭಕ್ತರು ವಿಠ್ಠಲನ ಪಾದ ಸ್ಪರ್ಶಿಸಿ ನಮಸ್ಕರಿಸಬಹುದಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.