ಸಿಂದಗಿ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಜು.೧೮ ಗುರುವಾರ ಮಧ್ಯಾಹ್ನ ೩ಗಂಟೆಗೆ ವಿಜಯಪುರ ಲೋಕಸಭಾ ಚುನಾವಣೆಯಲ್ಲಿ ನೂತನ ಸಂಸದರಾಗಿ ಆಯ್ಕೆಯಾದ ಕೇಂದ್ರದ ಮಾಜಿ ಸಚಿವ ಹಾಲಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಸನ್ಮಾನ ಸಮಾರಂಭ ಹಾಗೂ ಮಂಡಲ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ, ಸಂಸದ ರಮೇಶ ಜಿಗಜಿಣಗಿ, ಮಾಜಿ ಶಾಸಕ ರಮೇಶ ಭೂಸನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ, ಜಿಲ್ಲಾ ಮುಖಂಡರು ಹಾಗೂ ಜಿಲ್ಲೆಯ ಮಂಡಲದ ಪ್ರಮುಖರು ಆಗಮಿಸುತ್ತಿದ್ದಾರೆ.
ಕಾರಣ ಈ ಸನ್ಮಾನ ಸಮಾರಂಭ ಹಾಗೂ ಕಾರ್ಯಕಾರಿಣಿ ಸಭೆಯಲ್ಲಿ ತಾಲೂಕಿನ ಬಿಜೆಪಿ ಮಂಡಲದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಮಹಿಳಾ ಕಾರ್ಯಕರ್ತೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

