ವಿಜಯಪುರ: ನಗರದ ಜಿಲ್ಲಾ ಪಂಚಾಯತ್ ಪ್ರವೇಶ ದ್ವಾರದಿಂದ (ಕಮಾನ) ಜಿಲ್ಲಾ ಪಂಚಾಯತ್ ಕಚೇರಿಯವರೆಗೆ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರುವಾರ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದವರಿಗೆ ಸೂಚಿಸಿದರು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಾಲಮಂದಿರ, ಗಾಂಧಿಭವನದ ಪಕ್ಕದಲ್ಲಿ ಜಿಲ್ಲಾಡಳಿತ ಕಚೇರಿಗಳ ನಿರ್ಮಾಣಕ್ಕಾಗಿ ನಿಗದಿಪಡಿಸಲಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ರಸ್ತೆ ಕಾಮಗಾರಿ-ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ
Related Posts
Add A Comment

