ವಿಜಯಪುರ: ಗ್ರಾಮ ಆಡಳಿತ ಅಧಿಕಾರಿಗಳು ತೋಟಗಾರಿಕೆ ಅಧಿಕಾರಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು ಹಾಗೂ ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕಕ ಅಲ್ತಾಫ ಅಹ್ಮದ. ಮಣಿಯಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ಶಿದ್ದನಗೌಡ ಬಿರಾದಾರ ತರಬೇತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ಎನ್.ಎಸ್.ಎಸ್.ಓ ಬೆಳಗಾವಿ ಕಚೇರಿಯ ಎನ್.ಎನ್.ಕಾಂಬಳೆ, ಇಂಡಿ ಉಪ ವಿಭಾಗಾಧಿಕಾರಿ ಆಬಿದ್ ಗದ್ಯಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

