ವಿಜಯಪುರ: ಸೊಳೆಯಿಂದ ಹರಡುವ ಡೆಂಗ್ಯೂ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ವಿವಿಧ ವಾರ್ಡಗಳಲ್ಲಿ ಧೂಮೀಕರಣ ಮತ್ತು ಬೈ ಲಾರ್ವಾ ಸಿಂಪಡಣೆಗೆ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರುಗಳಿಗೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೂಚನೆ ನೀಡಿದ್ದಾರೆ.
ಡೆಂಗ್ಯೂ ನಿಯಂತ್ರಣ ಹಾಗೂ ನಗರದ ಸ್ವಚ್ಛತೆ ಕುರಿತು ಬುಧವಾರ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಪಾಲಿಕೆಯ ಆರೋಗ್ಯಾಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ನೈರ್ಮಲ್ಯ ಮೇಲ್ವಿಚಾರಕರುಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಗರದಾದ್ಯಂತ ಸಾರ್ವಜನಿಕರು ಮತ್ತು ವರ್ತಕರು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು, ಕಸವನ್ನು ಕಡ್ಡಾಯವಾಗಿ ಕಸದ ವಾಹನಕ್ಕೆ ನೀಡುವುದು, ಸಾರ್ವಜನಿಕರು ತಮ್ಮ ಮನೆ ಮತ್ತು ಸುತ್ತಲಿನ ಪರಿಸರದಲ್ಲಿ ಹೂವಿನ ಕುಂಡಳ, ನೀರು ಶೇಖರಿಸಿಟ್ಟ ಬಕೆಟ್‌ಗಳಲ್ಲಿ, ಹಳೆಯದಾದ ಟೈರ್ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗದಂತೆ ಗಮನಹರಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಮೂಲಕ ನಗರ ಸ್ವಚ್ಛತೆ ಕಾಪಾಡಿಕೊಂಡು ಪಾಲಿಕೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಯಿತು.
ಅದರಂತೆ ಸ್ವಚ್ಛತೆ ಕುರಿತು ಯಾವುದೇ ಉಲ್ಲಂಘನೆಯಾದಲ್ಲಿ ಅಂತಹವರ ವಿರುದ್ಧ ಕಾನೂನು ರಿತ್ಯ ಕ್ರಮ ವಹಿಸಿ ಸೂಕ್ತ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಡೆಂಗ್ಯೂ ನಿಯಂತ್ರಣಕ್ಕೆ ಧೂಮೀಕರಣ-ಬೈ ಲಾರ್ವಾ ಸಿಂಪಡಣೆಗೆ ಸೂಚನೆ
Related Posts
Add A Comment
