Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರದ ಬೆದರಿಕೆಗೆ ಬಗ್ಗೊಲ್ಲ! :ಸಚಿವ ಕೃಷ್ಣ ಬೈರೇಗೌಡ
(ರಾಜ್ಯ ) ಜಿಲ್ಲೆ

ಕೇಂದ್ರದ ಬೆದರಿಕೆಗೆ ಬಗ್ಗೊಲ್ಲ! :ಸಚಿವ ಕೃಷ್ಣ ಬೈರೇಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಂಗ್ರೆಸ್‌ ಸರ್ಕಾರ ಬುಡಮೇಲು ಮಾಡುವ ಉದ್ದೇಶ | ಸರ್ಕಾರ ಬುಡಮೇಲು ಮಾಡುವ ಹುನ್ನಾರ | ವಾಮಮಾರ್ಗದಲ್ಲಿ ಅಧಿಕಾರಕ್ಕೇರುವ ಯತ್ನ

ಬೆಂಗಳೂರು: “ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ” ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು, “ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಈ ಹಗರಣದಲ್ಲಿ ಉನ್ನತ ಮಟ್ಟದಲ್ಲಿರುವವರೂ ಸಹ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಆರೋಪಿಸಿದರು.
“ಹಗರಣದಲ್ಲಿ ಸಿಎಂ-ಡಿಸಿಎಂ ಸಹ ಭಾಗಿಯಾಗಿದ್ದಾರೆ ಎಂದು ತಪ್ಪೊಪ್ಪಿಗೆ ನೀಡಿ, ಇಲ್ಲದಿದ್ದರೆ ನಿಮಗೆ ಇಡಿ ಪವರ್‌ ಗೊತ್ತಿಲ್ಲ. ಆಮೇಲೆ ನೀವು ಕಷ್ಟಕ್ಕೆ ಸಿಲುಕುತ್ತೀರಿ ಎಂದು ವಿಚಾರಣೆ ವೇಳೆ ಹೆದರಿಸುವ ಮೂಲಕ ಇಡಿ ಅಧಿಕಾರಿಗಳು ತನಿಖೆಯನ್ನೇ ತಪ್ಪುದಾರಿಗೆ ಕೊಂಡೊಯ್ಯುತ್ತಿದ್ದಾರೆ. ಇಡಿ ಅಧಿಕಾರಿಗಳ ಜೊತೆ ರಾಜಿ ಸಂಧಾನ ಮಾಡಿಕೊಂಡು ಅವರು ಹೇಳಿದ್ದನ್ನು ಕೇಳಿಕೊಂಡು ಇರುವವರಿಗೆ ಅಭಯ ನೀಡುತ್ತಿದ್ದಾರೆ. ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪ್ರಜಾಪ್ರಭುತ್ವದ ಅಡಿಯಲ್ಲಿ ಚುನಾಯಿತಗೊಂಡಿರುವ ಸರ್ಕಾರವನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದರು.
“ಜನ ಮನ್ನಣೆ ಹಾಗೂ ಅಧಿಕಾರ ಕಳೆದುಕೊಂಡು ರಾಜ್ಯದಲ್ಲಿ ದುರ್ಬಲವಾಗಿರುವ ಬಿಜೆಪಿ ನಾಯಕರು ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ವಾಮಮಾರ್ಗದಲ್ಲಿ ಮತ್ತೆ ಅಧಿಕಾರಕ್ಕೆ ಏರಲು ಯತ್ನಿಸುತ್ತಿದ್ದಾರೆ. ಆಪರೇಷನ್‌ ಕಮಲ ಸೇರಿದಂತೆ ಬಿಜೆಪಿಯ ಇಂತಹ ಜನ ವಿರೋಧಿ ಕಸರತ್ತುಗಳು ದೇಶದ ರಾಜಕೀಯ ಇತಿಹಾಸದಲ್ಲಿ ಹೊಸ ವಿಚಾರವೇನಲ್ಲ. ಇಡಿ, ಸಿಬಿಐ ಹಾಗೂ ಐಟಿಯನ್ನು ಸರ್ಜಿಕಲ್‌ ಸ್ಟ್ರೈಕ್‌ ತರ ವಿರೋಧ ಪಕ್ಷಗಳ ವಿರುದ್ದ ಬಿಜೆಪಿ ಬಳಕೆ ಮಾಡುತ್ತಲೇ ಇದೆ. ಇದೀಗ ಮುಂದುವರೆದ ಬಾಗವಾಗಿ ಕರ್ನಾಟಕದಲ್ಲೂ ಹತಾಶ ಮನೋಭಾವದಿಂದ 2009ರಂತೆ ಆಪರೇಷನ್ ಕಮಲ ಸಾಧ್ಯವಿಲ್ಲ ಎಂದು ತಿಳಿದು ಇದೀಗ ಇಡಿ ಮೂಲಕ ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮುಂದೆ ನಿಂತು ಮಾಡುತ್ತಿದೆ. ಆದರೆ, ಇವರ ಗೊಡ್ಡು ಬೆದರಿಕೆಗಳಿಗೆ, ಸಂವಿಧಾನ ವಿರೋಧಿ ನಡೆಗಳಿಗೆ ಬಗ್ಗುವ ಮಾತೇ ಇಲ್ಲ” ಎಂದು ಸ್ಪಷ್ಟಪಡಿಸಿದರು.
“ಇಡಿ ಅಧಿಕಾರಿಗಳಿಗೆ ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಹುಡುಕುವ ಉದ್ದೇಶವೇ ಇಲ್ಲ. ಈ ತನಿಖೆ ನೆಪ ಮಾತ್ರವಾಗಿದ್ದು, ರಾಜ್ಯ ಕಾಂಗ್ರೆಸ್‌ ರ್ಕಾರವನ್ನು ಬುಡಮೇಲು ಮಾಡುವುದೇ ಇಡಿ ಅಧಿಕಾರಿಗಳ ತನಿಖೆಯ ಉದ್ದೇಶ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಪುನರುಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಚಿವರಾದ ಕೆಜೆ ಜಾರ್ಜ್‌, ದಿನೇಶ್‌ ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್‌. ಪೊನ್ನಣ್ಣ ಅವರು ಇದ್ದರು.

ವಿಪಕ್ಷದಲ್ಲಿದ್ರೆ ಕೇಸು, ಬಿಜೆಪಿಗೆ ಸೇರಿದರೆ ಖುಲಾಸೆ

“ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಕಳೆದ 10 ವರ್ಷದಲ್ಲಿ ಇಡಿ ರಾಜಕೀಯ ಅಸ್ತ್ರವಾಗಿದೆ. ಬಿಜೆಪಿಗೆ ಎಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೋ ಅಲ್ಲೆಲ್ಲಾ ಇಡಿ-ಐಟಿ ಬಳಸಿಕೊಂಡು ಆಡಳಿತ ಪಕ್ಷಗಳ ಮೇಲೆ ದಾಳಿ ಮಾಡುವುದು ವಾಡಿಕೆಯಾಗಿಬಿಟ್ಟಿದೆ. ಬಿಜೆಪಿಯ ಇಂತಹ ನೀಚ ನಡೆಗಳಿಗೆ ಜಾರ್ಖಂಡ್‌, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು, ಕೇರಳ, ಆಂದ್ರಪ್ರದೇಶ ಮಹಾರಾಷ್ಟ್ರದ ಸೇರಿದಂತೆ ಸಾಕಷ್ಟು ಉದಾಹರಣೆಗಳಿದ್ದು, ಪಟ್ಟಿ ಇನ್ನೂ ದೊಡ್ಡದಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.