ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ವಿಜಯಪುರ: ಕೇಂದ್ರ ಸರ್ಕಾರದಿಂದ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲೆಯ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರಪ್ರಶಸ್ತಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ : ೩೧-೦೭-೨೦೨೪ ಕೊನೆಯ ದಿನವಾಗಿದ್ದು, ೨ ಪಾಸ್ ಪೋರ್ಟ ಅಳತೆಯ ಭಾವಚಿತ್ರ (ವ್ಯಕ್ತಿ ವಿಭಾಗ), ಅರ್ಜಿದರರ ವ್ಯಕ್ತಿ, ಸಂಸ್ಥೆಗಳಿಂದ ವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆ (೧ಪುಟಕ್ಕೆ ಮೀರದಂತೆ) ಹಾಗೂ ಇತರೆ ದಾಖಲೆಗಳೊಂದಿಗೆ ಅರ್ಜಿಯನ್ನು www.awards.gov.in & www.depwd.gov.in ವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ತಮ್ಮ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಆವರಣ ವಿಜಯಪುರ ಕಚೇರಿಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರಾಜಶೇಖರ ಧೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
