ವಿಜಯಪುರ: ಇದೇ ಜುಲೈ ೨೨ ರಿಂದ ೩೧ರವರೆಗೆ ನಗರದ ಗಾಂಧಿಚೌಕ್ ಹತ್ತಿರದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಡಶಾಲಾ ವಿಭಾಗದಲ್ಲಿ ವಾಣಿಜ್ಯ ಪರೀಕ್ಷೆ ಕೇಂದ್ರಗಳು ಜರುಗಲಿವೆ. ಮುನ್ನೆಚರಿಕಾ ಕ್ರಮವಾಗಿ ಈ ಪರೀಕ್ಷಾ ಕೇಂದ್ರದ ೨೦೦ ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ ೯ ಗಂಟೆಯಿಂದ ಪರೀಕ್ಷೆ ಮುಕ್ತಾಯದವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ, ಇತರರು ಮೊಬೈಲ್ ಪೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್ ಬಳಸಲು ಅನುಮತಿಸಲಾಗಿದೆ. ಪರೀಕ್ಷಾ ಕೇಂದ್ರದ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಕೇಂದ್ರಗಳು ಹಾಗೂ ಕೋಚಿಂಗ್ ಕೇಂದ್ರಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಆದೇಶಿಸಿದೆ.
Subscribe to Updates
Get the latest creative news from FooBar about art, design and business.
ಜು.೨೨ ರಿಂದ ೩೧ರವರೆಗೆ ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ ಜಾರಿ
Related Posts
Add A Comment
