ಅಫಜಲಪುರ: ಸಮಾಜ ಸೇವಕರಾದ ಆರ್.ಡಿ ಪಾಟೀಲ ಅವರ ೪೧ನೇ ಹುಟ್ಟು ಹಬ್ಬದ ಪ್ರಯುಕ್ತ ಜು.೨೨ರಂದು ಅಫಜಲಪುರ ತಾಲೂಕಿನ ಜ್ಞಾನಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಸುರಕ್ಷಾ ಬ್ಲಡ್ ಸೆಂಟರ್ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಡಿ ಪಾಟೀಲ ತಿಳಿಸಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರ್.ಡಿ ಪಾಟೀಲ್ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರಕ್ಕೆ ಅಪಜಲಪುರದ ವಿಶ್ವರಾದ್ಯ ಮಳೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ. ೧೦೦೮ ಸಸಿ ನೆಡುವ ಕಾರ್ಯಕ್ರಮಕ್ಕೆ ಮಲ್ಲಾಬಾದನ ರೇವಣಸಿದ್ದೇಶ್ವರ ಶಿವಾಚಾರ್ಯರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಭಾಗಿಯಾಗಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

