ದೇವರಹಿಪ್ಪರಗಿ: ಮಕ್ಕಳು, ಯುವಜನತೆ ಹಾಗೂ ವಿದ್ಯಾರ್ಥಿಗಳಲ್ಲಿ ಜೀವಜಲದ ಮಹತ್ವ ತಿಳಿಸಿ, ಮಿತವ್ಯಯದ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ರಂಭಾಪುರಿ ಪೀಠದ ಜಗದ್ಗುರು ಡಾ.ಪ್ರಸನ್ನ್ ರೇಣುಕ ವೀರಸೋಮೇಶ್ವರ ಶ್ರೀಗಳು ಹೇಳಿದರು.
ತಾಲ್ಲೂಕಿನ ಯಾಳವಾರ ಗ್ರಾಮದ ಸೋಮೇಶ್ವರ ಪ್ರೌಢಶಾಲೆ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದು ಭೂಮಿಯ ಬಹುತೇಕ ದೇಶಗಳಲ್ಲಿ ಶುದ್ಧ ನೀರಿನ ಅಭಾವ ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಗೆ ನೀರನ್ನು ಉಳಿಸುವ ಗುರುತರ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ. ಆದ್ದರಿಂದ ನಾವೆಲ್ಲರೂ ನೀರನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಕೆ ಮಾಡಿಕೊಳ್ಳೋಣ ಎಂದರು.
ಯಾಳವಾರ ಮಠದ ಕೇದಾರಲಿಂಗ ದೇವರು. ಕನ್ನೂರು ಮಠದ ಸೋಮನಾಥ ಶಿವಾಚಾರ್ಯರು. ಸೋಮೇಶ್ವರ ವಿದ್ಯಾವರ್ಧಕÀ ಸಂಘದ ಅಧ್ಯಕ್ಷ ರಾಜುಗೌಡ ನಾಡಗೌಡ್ರ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
Related Posts
Add A Comment