ವಿಜಯಪುರ: ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತರಿರುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಕರು (ನಿವೃತ್ತರೂ ಸೇರಿ), ನಿವೃತ್ತ ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಎಂ.ಎಸ್.ಡಬ್ಲೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಪದವಿ ಓದುತ್ತಿರುವ ಹಾಗೂ ಕಾನೂನು ಪದವಿ ವಿದ್ಯಾರ್ಥಿಗಳು, ರಾಜಕೀಯ ಪಕ್ಷಕ್ಕೆ ಸಂಬಂಧಪಡದ ಹಾಗೂ ಸೇವಾ ಮನೋಭಾವ ಹೊಂದಿರುವ ಸಂಘ-ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘ, ಮೈತ್ರಿ ಸಂಘ ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ದೀರ್ಘಕಾಲಿನ ಕಾರಾಗೃಹ ಶಿಕ್ಷೆಗೊಳಗಾಗಿರುವ ಸನ್ನಡತೆಯ ಖೈದಿಗಳನ್ನು ಗುರುತಿಸಿ ಅವರನ್ನು ಅರೆಕಾಲಿಕ ಸ್ವಯಂ ಸೇವಕರನ್ನಾಗಿ ನೇಮಕ ಮಾಡಿಕೊಳ್ಳಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನ ನೀಡಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ : ೦೩-೦೮-೨೦೨೪ರೊಳಗಾಗಿ ವಿಜಯಪುರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ : https://vijayapura.dcourts.gov.in/dlsa/ನಲ್ಲಿ ಲಭ್ಯವಿರುವ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಬಾಗಲಕೋಟೆ ರಸ್ತೆ, ವಿಜಯಪುರ ಕಚೇರಿಗೆ ನೇರವಾಗಿ ಅಥವಾ ಇಮೇಲ್ ವಿಳಾಸ dlsavjp@gmail.com ಕ್ಕೆ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಸ್ವಯಂ ಸೇವಕರ ಆಯ್ಕೆ: ಅರ್ಜಿ ಆಹ್ವಾನ
Related Posts
Add A Comment
