ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ವಸತಿ ಶಾಲೆ-ಕಾಲೇಜ್‌ಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಗುತ್ತಿಗೆಯಾಧಾರದ ಮೇಲೆ ನೇಮಕಾತಿಗಾಗಿ ಇಂದಿರಾ ಗಾಂಧಿ ವಸತಿ ಶಾಲೆ, ಜೈನ್ ಮಂದಿರ ಹತ್ತಿರ, ಹಂಚನಾಳ ರಸ್ತೆ, ವಿಜಯಪುರದಲ್ಲಿ ಜು.೨೭ರಂದು ಬೆಳಿಗ್ಗೆ ೧೧ ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಗಣಕಯಂತ್ರ ಉಪನ್ಯಾಸಕರು-೦೧, ರಸಾಯನ ಉಪನ್ಯಾಸಕರು-೦೧, ವಿಜ್ಞಾನ ಶಿಕ್ಷಕರು-೦೧, ಸಮಾಜ ವಿಜ್ಞಾನ ಶಿಕ್ಷಕರು-೦೧, ಆಂಗ್ಲಭಾಷಾ ಶಿಕ್ಷಕರು-೦೧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳು ಹಾಗೂ ಒಂದು ಝರಾಕ್ಸ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಡಿ.ಎಂ.ಚಲವಾದಿ, ಜಿಲ್ಲಾ ಸಮನ್ವಯಾಧಿಕಾರಿಗಳು, ವಿಜಯಪುರ ಮೊ: ೯೮೮೦೮೯೯೫೧೦ ಸಂಖ್ಯೆಗೆ ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
