ದೇವರಹಿಪ್ಪರಗಿ: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದು, ಲಿಂಗಾಯತ ವಿರೋಧಿಯಲ್ಲ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ್ ಗಡೇದ ಹೇಳಿದ್ದಾರೆ.
ಪಟ್ಟಣದಲ್ಲಿ ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಟ್ಟಣ ಪಂಚಾಯಿತಿ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಆರೋಪಿಸಿದಂತೆ ಕಾಂಗ್ರೆಸ್ ಯಾರಿಗೂ ಅನ್ಯಾಯ ಮಾಡಿಲ್ಲ. ಕಾಂಗ್ರೆಸ್ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ತಂದಿದೆ. ಜಿಲ್ಲೆಯಲ್ಲಿ ಎಲ್ಲ ವರ್ಗದ ಅಧಿಕಾರ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಉಸ್ತುವಾರಿ ಸಚಿವರು ಆದಿಯಾಗಿ ಐದು ಜನ ಲಿಂಗಾಯತ ಶಾಸಕರಿರುವುದೇ ನಿದರ್ಶನವಾಗಿದೆ. ಇನ್ನೂ ಕ್ಷೇತ್ರದ ಇಬ್ಬರು ಮುಖಂಡರು ಕೆಪಿಸಿಸಿ ಪ್ರಧಾನಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದು, ಬಹುತೇಕ ಹೆಚ್ಚಿನ ಪ್ರಮಾಣದಲ್ಲಿ ಲಿಂಗಾಯತರಿಗೆ ಅವಕಾಶ ನೀಡಲಾಗಿದೆ. ಅದರಂತೆ ಹಲವಾರು ಹುದ್ದೆಗಳಿಗೆ ನಾಮ ನಿರ್ದೇಶನ ಮಾಡುವಾಗಲೂ ಲಿಂಗಾಯತರಿಗೆ ಪ್ರಾತಿನಿಧ್ಯ ನೀಡಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಉಸ್ತುವಾರಿ ಸಂಚಾಲಕನಾಗಿ ಕಾರ್ಯ ನಿರ್ವಹಿರುವ ನನಗೆ ಯಾವುದೇ ಭೇಧಭಾವ ಕಂಡು ಬಂದಿಲ್ಲ. ಆದರೆ ಬಿಜೆಪಿಯೇ ಭೇಧಭಾವ ನೀತಿ ಅನುಸರಿಸಿದ್ದು, ಅವರ ಅಧಿಕಾರವಧಿಯಲ್ಲಿ ಲಿಂಗಾಯತರು, ಒಕ್ಕಲಿಗರನ್ನು ಬಿಟ್ಟು ಯಾರಿಗೆ ಅಧಿಕಾರ ನೀಡಲಾಗಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈಗ ನಮ್ಮ ಸರ್ಕಾರವಿದ್ದು ನಮ್ಮ ಪಕ್ಷದ ಕಾರ್ಯಕರ್ತರು, ಪಕ್ಷಕ್ಕಾಗಿ ಶ್ರಮಿಸಿದವರಿಗೆ ಹುದ್ದೆಗಳನ್ನು ನೀಡಲಾಗುತ್ತದೆ. ಅದನ್ನು ಬಿಜೆಪಿ, ಜೆಡಿಎಸ್ ಪಕ್ಷದವರಿಗೆ ಕೇಳಿ ಕೊಡಬೇಕೆಂದೆನು ನಿಯಮವಿಲ್ಲ. ಮೇಲಾಗಿ ಬಿಜೆಪಿ ಸರ್ಕಾರದಲ್ಲಿ ಯಾವುದೇ ನಾಮನಿರ್ದೇಶನ ಮಾಡಿದ ಉದಾಹರಣೆಗಳಿಲ್ಲ. ಈಗ ಕಾಂಗ್ರೆಸ್ ಸರ್ಕಾರ ಕಾರ್ಯಕರ್ತರನ್ನು ಗುರುತಿಸುತ್ತಿರುವುದು ವಿರೋಧ ಪಕ್ಷಗಳಿಗೆ ಸಹಿಸಲಾಗುತ್ತಿಲ್ಲ ಅದಕ್ಕಾಗಿ ಇಂತಹ ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

