Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಥಳೀಯರಿಗೆ ಉದ್ಯೋಗ ಒದಗಿಸುವ ಮಸೂದೆಗೆ ಆಕ್ಷೇಪ :ಡಿವೈಎಫ್‌ಐ ಖಂಡನೆ
(ರಾಜ್ಯ ) ಜಿಲ್ಲೆ

ಸ್ಥಳೀಯರಿಗೆ ಉದ್ಯೋಗ ಒದಗಿಸುವ ಮಸೂದೆಗೆ ಆಕ್ಷೇಪ :ಡಿವೈಎಫ್‌ಐ ಖಂಡನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಕರ್ನಾಟಕ ಸರಕಾರ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.೫೦ ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.೭೫ ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆಗೆ ಕರ್ನಾಟಕದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಕರ್ನಾಟಕ ರಾಜ್ಯ ಸಮಿತಿಯು ಸ್ವಾಗತಿಸುತ್ತದೆ. ಆದರೆ ಖಾಸಗಿ ಕಂಪೆನಿಗಳ ಆಕ್ಷೇಪದ ನೆಪವೊಡ್ಡಿ ಸ್ವತಃ ಸರಕಾರವೇ ಮಸೂದೆಯನ್ನು ತಡೆ ಹಿಡಿದಿರುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ರಾಜ್ಯ ಸಮಿತಿ ಸದಸ್ಯ ರಮೇಶ ಸಾಸಾಬಾಳ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸ್ಥಳೀಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಸರೋಜಿನಿ ಮಹಿಷಿ ಆಯೋಗ ವರದಿ ನೀಡಿ ಹಲವು ದಶಕಗಳೇ ಕಳೆದಿವೆ. ಹತ್ತಾರು ವರ್ಷಗಳಿಂದ ಡಿವೈಎಫ್‌ಐ ಸೇರಿದಂತೆ ನಾಡಿನ ಜನಪರ ಸಂಘಟನೆಗಳು ಸ್ಥಳೀಯರಿಗೆ ಉದ್ಯೋಗ ಖಾತ್ರಿಪಡಿಸಲು ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟಗಳನ್ನು ನಡೆಸುತ್ತಲೇ ಬಂದಿವೆ. ಇದೀಗ ಕರ್ನಾಟಕ ಸರಕಾರ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಮಸೂದೆ ಮಂಡಿಸಲು ಮುಂದಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ಖಾಸಗಿ ಕಂಪೆನಿಗಳ ನಡೆಯು ಕರ್ನಾಟಕದ ಜನರಿಗೆ ಅದರಲ್ಲೂ ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ರಾಜ್ಯದ ಯುವಜನರಿಗೆ ಮಾಡುತ್ತಿರುವ ಮಹಾದ್ರೋಹವಾಗಿದೆ.
ಆಡಳಿತಾತ್ಮಕ ಹುದ್ದೆಗಳಲ್ಲಿ ಕನಿಷ್ಠ ಶೇ.೭೫ ಹಾಗೂ ಆಡಳಿತಾತ್ಮಕವಲ್ಲದ (ಸಿ ಮತ್ತು ಡಿ ದರ್ಜೆಯ) ಎಲ್ಲ ಹುದ್ದೆಗಳಲ್ಲಿ ಶೇ.೧೦೦ ಸ್ಥಳೀಯರಿಗೆ ಅವಕಾಶ ಸಿಗುವಂತೆ ಕಾಯಿದೆ ಮಾಡುವಂತೆ ಆಗ್ರಹಿಸುತ್ತದೆ. ಪ್ರಸ್ತುತ ಕಾನೂನು ಸರಿಯಾಗಿ ಪಾಲನೆಯಾಗದೇ ಇದ್ದರೆ ಅಥವಾ ಕಾನೂನನ್ನು ಉಲ್ಲಂಘಿಸಿದರೆ ಕನಿಷ್ಠ ೧೦,೦೦೦ ರೂ.ನಿಂದ ಗರಿಷ್ಠ ೨೫,೦೦೦ ರೂ.ವರೆಗೆ ಅತ್ಯಂತ ಕಡಿಮೆ ದರದ ದಂಡವನ್ನು ನಿಗದಿಪಡಿಸಲಾಗಿದೆ. ಕಾನೂನಿನ ಉಲ್ಲಂಘನೆ ಮುಂದುವರೆದರೆ ದಂಡದ ಮೊತ್ತವನ್ನು ೧ಲಕ್ಷ ರೂ.ವರೆಗೆ ಹೆಚ್ಚಿಸಬೇಕು. ಈ ಕಾನೂನು ಉಲ್ಲಂಘಿಸಿ ಉದ್ಯೋಗ ನಿರಾಕರಿಸಿದರೆ ಅಂತಹ ಅಪರಾಧಕ್ಕಾಗಿ ಜೈಲು ಶಿಕ್ಷೆಯಂತಹ ಕಠಿಣ ಕ್ರಮವನ್ನು ಸರಕಾರ ನಿಗದಿಪಡಿಸಬೇಕು. ಆಗ ಮಾತ್ರ ಈ ಕಾನೂನಿಗೆ ಬಲ ಬರುತ್ತದೆ. ಇಲ್ಲವಾದಲ್ಲಿ ಖಾಸಗಿ ಕಂಪೆನಿಗಳು ಇದರ ದುರ್ಲಾಭ ಪಡೆಯುವ ಅಪಾಯವಿದೆ ಎಂದು ಡಿವೈಎಫ್‌ಐ ಆತಂಕ ವ್ಯಕ್ತಪಡಿಸುತ್ತದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.