Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರ ಅನ್ಯಾಯ ಸರಿಪಡಿಸದಿದ್ದರೆ ಡಿಎಸ್ಸೆಸ್ ಒಕ್ಕೂಟ ಹೋರಾಟ!
(ರಾಜ್ಯ ) ಜಿಲ್ಲೆ

ಸರ್ಕಾರ ಅನ್ಯಾಯ ಸರಿಪಡಿಸದಿದ್ದರೆ ಡಿಎಸ್ಸೆಸ್ ಒಕ್ಕೂಟ ಹೋರಾಟ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣ ಹಿಂಪಡೆಯಲು ಆಗ್ರಹ

ಬೆಂಗಳೂರು: ದಲಿತರಿಗೆ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವ ರಾಜ್ಯ ಸರ್ಕಾರದ ನಡೆಯ ವಿರುದ್ದ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅನ್ಯಾಯ ಸರಿಪಡಿಸದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಒಕ್ಕೂಟದ ಪ್ರಮುಖರು “ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು ಮತ್ತು ಇತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದ್ದಾರೆ.
ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿ ಸರ್ವಾಧಿಕಾರ ಸ್ಥಾಪಿಸಲು ಹೊರಟಿರುವ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ಸೋಲಿಸದೆ ದಲಿತರಿಗೆ ಬೇರೆ ದಾರಿಯೇ ಇರಲಿಲ್ಲ. ಹಾಗಾಗಿ, ರಾಜ್ಯ, ರಾಷ್ಟ್ರದಲ್ಲಿ ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಲು ದಲಿತರು ಅನಿವಾರ್ಯವಾಗಿ ಕಾಂಗ್ರೆಸ್‌ ಪಕ್ಷದೊಂದಿಗೆ ನಿಲ್ಲಬೇಕಾಯಿತು. ಬಹಿರಂಗವಾಗಿಯೇ ದಲಿತ ಸಂಘಟನೆಗಳು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್ ಸರ್ಕಾರ ರಚಿಸುವಲ್ಲಿ ಸಫಲವಾಯಿತು ಎಂದು ಹೇಳಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸಿರುವ ಕಾಂಗ್ರೆಸ್, ದಲಿತರ ಕೆಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಹೆಜ್ಜೆ ಇಟ್ಟಿತಾದರೂ, ಕೆಲವೇ ದಿನಗಳಲ್ಲಿ ಭ್ರಮನಿರಸನ ಉಂಟು ಮಾಡಿದೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ದಲಿತರಿಗೆ ಮೀಸಲಿಟ್ಟ ಹಣವನ್ನು ಬಳಸಿಕೊಂಡು ದಲಿತರ ಬೆನ್ನಿಗೆ ಚೂರಿ ಹಾಕಿದೆ ಎಂದು ಒಕ್ಕೂಟ ಅಸಮಾಧಾನ ಹೊರ ಹಾಕಿದೆ.
ಬ್ಯಾಕ್‌ಲಾಗ್ ನೇಮಕಾತಿಯಿಂದ ಹಿಡಿದು, ಇತ್ತೀಚಿನ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವವರೆಗೂ ಸರ್ಕಾರ ವಂಚನೆ ಮುಂದುವರೆಸಿದೆ. ಬ್ಯಾಕ್‌ಲಾಗ್ ಹುದ್ದೆ ತುಂಬುತ್ತಿಲ್ಲ, ದಲಿತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಅಡಚಣೆ ಮಾಡುತ್ತಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ತರುತ್ತಿಲ್ಲ. ಈ ಕುರಿತು ದಲಿತ ಜನಸಮೂಹದಲ್ಲಿ ತೀವ್ರ ಅಸಮಾಧಾನ ಮೂಡಿದ್ದು, ಕಾಂಗ್ರೆಸ್ ವಿರುದ್ದ ತಿರುಗಿ ಬೀಳುವ ಹಂತಕ್ಕೆ ಬಂದು ಮುಟ್ಟಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡೆಯನ್ನು ನಾವು ಸಹಿಸುವುದಿಲ್ಲ. ದಲಿತರಿಗೆ ಮಾಡಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಬೃಹತ್ ಹೋರಾಟ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಎಚ್ಚರಿಸಿದೆ.

ಒಕ್ಕೂಟದ ಹಕ್ಕೋತ್ತಾಯಗಳು

1.ಎಸ್‌ಸಿ, ಎಸ್‌ಟಿ ಬ್ಯಾಕ್‌ಲಾಗ್ ಉದ್ಯೋಗಗಳನ್ನು ಕೂಡಲೇ ಭರ್ತಿ ಮಾಡಬೇಕು.

  1. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಯಾವುದೇ ಕಾರಣಕ್ಕೂ ಇತರೆ ಯೋಜನೆಗಳಿಗೆ ಬಳಸಬಾರದು. ಈಗಾಗಲೇ ಗ್ಯಾರಂಟಿ ಯೋಜನೆಗೆ ಬಳಸಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು. ಕಳೆದ ಸಾಲಿನ 11 ಸಾವಿರ ಕೋಟಿ ರೂ. ಮತ್ತು ಈ ಸಾಲಿನ 14 ಸಾವಿರ ಕೋಟಿ ರೂ. ಹಣವನ್ನು ಈ ಕೂಡಲೇ ಹಿಂಪಡೆಯಬೇಕು.
  2. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಯೋಜನೆಗಳ ಜಾರಿಗೆ ಕೂಡಲೇ ಏಕಗವಾಕ್ಷಿ ಪದ್ದತಿಯನ್ನು ಜಾರಿಗೊಳಿಸಬೇಕು.
  3. ಹೊರಗುತ್ತಿಗೆ ನೇಮಕಾತಿಯಲ್ಲಿ ಕಡ್ಡಾಯವಾಗಿ ರೋಸ್ಟರ್ ಪದ್ದತಿಗನುಗುಣವಾಗಿ ಮೀಸಲಾತಿ ನೀಡಬೇಕು
  4. ಪರಿಶಿಷ್ಟ ಜಾತಿ ಮತ್ತು ಪಂಗಡದ ಮೆರಿಟ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕೆ ವಿಧಿಸಿರುವ ಆದಾಯ ಹಾಗೂ ಅಂಕಗಳ ಮಿತಿಯನ್ನು ರದ್ದುಗೊಳಿಸಿ, ಈ ಹಿಂದೆ ನಿಗದಿಪಡಿಸಿದಂತೆ ಮರು ಜಾರಿಗೊಳಿಸಬೇಕು.
  5. ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡುತ್ತಿರುವ ಎಲ್ಲಾ ಅನುದಾನಗಳ ನಿರ್ವಹಣೆ ಮತ್ತು ಪರಿವೀಕ್ಷಣೆ ಮಾಡಲು ಸ್ವತಂತ್ರ ಕಾವಲು ಸಮಿತಿ ನೇಮಿಸಬೇಕು ಹಾಗೂ ಅದಕ್ಕೆ ನ್ಯಾಯಾಂಗ ಅಧಿಕಾರ ನೀಡಬೇಕು.
  6. ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಚಿಸುವ ದಲಿತ ವಿದ್ಯಾರ್ಥಿಗಳಿಗೆ ‘ಪ್ರಬುದ್ದ ಯೋಜನೆ’ ಮೂಲಕ ನೀಡುತ್ತಿರುವ ನಿರ್ವಹಣ ವೆಚ್ಚದ ಮಿತಿಯನ್ನು ಸಡಿಲಗೊಳಿಸಿ, ವಾಸ್ತವ ವೆಚ್ಚವನ್ನು ನೀಡಬೇಕು. ಈ ಹಿಂದಿನಂತೆ ಎರಡು ಕೋಟಿಗಳವರೆಗೆ ನೀಡುತ್ತಿರುವ ಅನುದಾನವನ್ನು ಮುಂದುವರೆಸಬೇಕು.
  7. ವಿದೇಶದಲ್ಲಿ ಪಿಹೆಚ್‌ಡಿ ಪದವಿ ಪಡೆಯಲು ನೀಡುತ್ತಿದ್ದ ಧನ ಸಹಾಯ ರದ್ದುಗೊಳಿಸಿರುವುದನ್ನು ಕೂಡಲೇ ಹಿಂಪಡೆದು, ಹಿಂದಿ ಪದ್ದತಿಯನ್ನು ಮುಂದುವರೆಸಬೇಕು.
  8. ವಸತಿ ಶಾಲೆಗಳ ಪ್ರವೇಶಕ್ಕೆ ನಿಗದಿಪಡಿಸಿರುವ ಪ್ರವೇಶ ಪರೀಕ್ಷೆಗಳನ್ನು ರದ್ದುಪಡಿಸಿ ಸಾಮಾಜಿಕ ಹಾಗೂ ಅರ್ಥಿಕ ಮಾನದಂಡದ ಮೇಲೆ ಪ್ರವೇಶಾತಿ ನೀಡಬೇಕು.
BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.