Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರಹಗಾರನಿಗೆ ಸಾಮಾಜಿಕ ಜವಾಬ್ದಾರಿಯೂ ಅಗತ್ಯ :ಉಪ್ಪಿನ
(ರಾಜ್ಯ ) ಜಿಲ್ಲೆ

ಬರಹಗಾರನಿಗೆ ಸಾಮಾಜಿಕ ಜವಾಬ್ದಾರಿಯೂ ಅಗತ್ಯ :ಉಪ್ಪಿನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿಯಲ್ಲಿ ‘ಹಳೇಬೇರು-ಹೊಸಚಿಗುರು’ ಲೇಖಕರೊಂದಿಗಿನ ಸಂವಾದ ಕಾರ್ಯಕ್ರಮ

ಇಂಡಿ: ಸಾಹಿತಿಯಾದವನು ಸಮಾಜದ ಆಗುಹೋಗುಗಳಿಗೆ ಪೂರಕವಾಗಿರುತ್ತಾನೆ, ಮೌಲ್ಯಯುತವಾದ ಬದುಕು ಮತ್ತು ಬರಹ ಇರುವ ಲೇಖಕ ಉತ್ತಮ ಸಮಾಜದ ನಿರ್ವಾಹಕನಾಗಿರುತ್ತಾನೆ ಎಂದು ಹಿರಿಯ ಕಾದಂಬರಿಕಾರ ಸಿದ್ಧರಾಮ ಉಪ್ಪಿನ ಹೇಳಿದರು.
ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗವು ಶನಿವಾರ ಹಮ್ಮಿಕೊಂಡಿದ್ದ ‘ಹಳೇಬೇರು-ಹೊಸಚಿಗುರು’ ಲೇಖಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯತಿಥಿಗಳಾಗಿ ಮಾತನಾಡಿದರು.
ಕಾದಂಬರಿಗಳಲ್ಲಿ ವಾಸ್ತವ ಪ್ರಜ್ಞೆಯನ್ನು ನಿರೂಪಿಸುವ ಸಂದರ್ಭದಲ್ಲಿ ಸತ್ಯದ ವಿಮುಖರಾಗಿ ಬರೆಯುವುದು ಸರಿಯಲ್ಲ, ಅನುಭವ ಮತ್ತು ಬರಹ ತಾಳೆಯಾಗುವಂತೆ ಲೇಖಕ ಬದುಕುಬೇಕಾಗುತ್ತದೆ ಎಂದರು.
ಯುವಕವಿ ದೇವೂ ಮಾಕೊಂಡ ಮಾತನಾಡಿ ಯುವಕವಿಗಳಿಗೆ ಕನ್ನಡ ಸಾಹಿತ್ಯದ ಪರಂಪರೆಯ ಬಗ್ಗೆ ಅರಿವು ಇರಬೇಕು, ಪಠ್ಯದೊಂದಿಗೆ ಸಾಹಿತ್ಯದ ಕೃತಿಗಳನ್ನು ವಿದ್ಯಾರ್ಥಿ ಹೆಚ್ಚು ಓದುವದನ್ನು ರೂಢಿಸಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ರಮೇಶ ಕತ್ತಿ ಮಾತನಾಡಿ ಹಳೆಬೇರು ಹೊಸಚಿಗುರು ಕಾರ್ಯಕ್ರಮವು ಹಿರಿಯರನ್ನು ಗೌರವಿಸೋದು ಮತ್ತು ಕಿರಿಯರನ್ನು ಪ್ರೋತ್ಸಾಹಿಸೋದು ಮುಖ್ಯ ಉದ್ದೇಶವಾಗಿದೆ. ಹಿರಿಯರ ಬದುಕು ಕಿರಿಯರಿಗೆ ಮಾರ್ಗದರ್ಶನ ನೀಡುವಂತಿರಬೇಕು ಎಂದರು.
ಪ್ರಾಚಾರ್ಯ ಪ್ರೊ.ಆರ್.ಎಚ್.ರಮೇಶ್ ಅಧ್ಯಕ್ಷತೆವಹಿಸಿ ಮಾತನಾಡಿ “ಇಂತಹ ಕಾರ್ಯಕ್ರಮಗಳು ನಡೆಯುವದರಿಂದ ವಿದ್ಯಾರ್ಥಿಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಿಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ಕಾಲೇಜಿನ ಎಲ್ಲಾ ವಿಭಾಗಗಳು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ, ಇವುಗಳಲ್ಲಿ ಭಾಗವಹಿಸಿ ಲಾಭ ಪಡೆದುಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಪಿಎಂ ಉಷಾ ಯೂನಿಟ್ ಸಂಯೋಜಕ ಪ್ರೊ.ಕಿರಣ ರೇವಣಕರ, ಐಕ್ಯೂಎಸಿ ಸಂಯೋಜಕರಾದ ಡಾ.ಶೀರಿನುಸುಲ್ತಾನ ಇನಾಂದಾರ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ತ್ರಿವೇಣಿ ಬನಸೋಡೆ ಸ್ವಾಗತಿಸಿದರು. ಪ್ರೊ. ಆರ್.ಎಸ್.ಗೊರನಾಳ ವಂದಿಸಿದರು. ಪ್ರೊ. ಕಾಶೀನಾಥ ಜಾಧವ ನಿರೂಪಿಸಿದರು.

ಲೇಖಕರೊಂದಿಗೆ ಸಂವಾದ

ಹಿರಿಯ ಕಾದಂಬರಿಕಾರ ಸಿದ್ಧರಾಮ ಉಪ್ಪಿನ, ಯವಕವಿ ದೇವೂ ಮಾಕೊಂಡ ಅವರು “ಹಳೇಬೇರು-ಹೊಸಚಿಗುರು’ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಬಹಳ ಕುತೂಹಲದಿಂದ ಲೇಖಕರ ಬದುಕು, ಅವರ ಬಾಲ್ಯ, ಬರಹ ರಚನೆಗೆ ಪ್ರೇರಣೆ ಮೊದಲಾದವುಗಳನ್ನು ಕೇಳಿ ತಿಳಿದುಕೊಂಡರು.
ಸಾಹಿತ್ಯ ರಚನೆಗೆ ಇರಬೇಕಾದ ಪ್ರಾಥಮಿಕ ಸಂಗತಿ, ಬರಹ ಹೇಗೆ ರೂಡಿಸಿಕೊಳ್ಳಬೇಕು ಎಂಬುದರ ಬಗ್ಗೆಯೂ ಇರ್ವ ಲೇಖಕರಿಂದ ಮಾಹಿತಿ ಪಡೆದುಕೊಂಡರು.
ವಿದ್ಯಾರ್ಥಿಗಳಾದ ಕು. ಪ್ರೀತಿ ನಾದ, ಪ್ರತಿಭಾ ಮಸಳಿ, ಛಾಯಾ ಹೂಗಾರ, ಬೀರು ನಂದಗೊಂಡ, ಬಸವರಾಜ ಪೂಜಾರಿ, ಈರಣ್ಣ ಆಲಮೇಲ, ಕಾವ್ಯ ಮೊದಲಾದ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.