ಮುದ್ದೇಬಿಹಾಳ: ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಿದ್ದಗಂಗಾ ಪ್ಯಾರಾ ಮೆಡಿಕಲ್ ಕಾಲೇಜು ಇವರ ಸಹಯೋಗದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಡೆಂಗ್ಯೂ ರೋಗ ನಿಯಂತ್ರಣ ಮುಂಜಾಗ್ರತೆ ಹಾಗೂ ರೋಗ ಲಕ್ಷಣ ಚಿಕಿತ್ಸೆ ಕುರಿತು ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಸಿದ್ದಗಂಗಾ ಪ್ಯಾರಾ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಗೆ ಸೊಳ್ಳೆ ಕಡಿತದಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಡೆಂಗೀ ಜ್ವರ ನಿಯಂತ್ರಿಸೋಣ ಎಂಬ ಘೋಷವಾಕ್ಯದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ, ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಈಡಿಸ್ ಲಾರ್ವ್ ಸಮೀಕ್ಷೆ ಕೈಗೊಳ್ಳಲಾಯಿತು.
ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಲಾರ್ವ ತಾಣಗಳನ್ನು ತೋರಿಸಿ ಅವುಗಳನ್ನು ನಾಶಪಡಿಸುವ ಕ್ರಮಗಳನ್ನು ತಿಳಿಸಲಾಯಿತು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಎಸ್.ಸಿ.ಮಾನಕರ, ವ್ಹಿ.ಬಿ.ಡಿ ಮೇಲ್ವಿಚಾರಕ ಎಸ್.ಸಿ.ರುದ್ರವಾಡಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ.ಎಸ್.ಗೌಡರ, ಎಸ್.ಐ.ಕಮಲಪ್ಪನವರ, ಇಸ್ಮಾಯಿಲ್ ವಾಲಿಕರ, ಎಸ್.ಆರ್.ಸಜ್ಜನ, ಎನ್.ಎಂ.ಯಾಳವಾರ, ರೇಷ್ಮಾ ರೂಡಗಿ, ಕೆ.ಟಿ.ಮುಲ್ಲಾ, ಕಾಲೇಜಿನ ವಿದ್ಯಾರ್ಥಿಗಳು ಆಶಾ ಕಾರ್ಯಕರ್ತೆಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

