ಬಸವನಬಾಗೇವಾಡಿ: ಹಡಪದ ಅಪ್ಪಣ್ಣ ಒಂದೇ ಸಮುದಾಯಕ್ಕೆ ಸೀಮಿತವಲ್ಲ. ಮಾನವ ಜನಾಂಗಕ್ಕೆ ಸಂದೇಶ ನೀಡಿದ್ದಾರೆ. ಶಿವಶರಣ ಹಡಪದ ಅಪ್ಪಣ್ಣನವರ ಆದರ್ಶವನ್ನು ನಮ್ಮ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು
ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯದಿಂದ ಭಾನುವಾರ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತೋತ್ಸವದಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶರಣ ಹಡಪದ ಅಪ್ಪಣ್ಣನವರು ಜಾತಿ, ಧರ್ಮ, ವರ್ಣರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ.
ಶರಣರ ಕಾಯಕ, ಬದುಕು ಯುವ ಪೀಳಿಗೆಗೆ ದಾರಿ ದೀಪವಾಗಬೇಕು. ಶರಣರು ಮಾಡಿದ ಹೋರಾಟದ ಉದ್ದೇಶದ ಬಗ್ಗೆ ತಿಳಿದುಕೊಳ್ಳಬೇಕಿದೆ.ಅದರ ಬಗ್ಗೆ ಹೆಚ್ಚು ಬೆಳಕು ಚೆಲ್ಲುವ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು. ಅವರ ವಚನವನ್ನು ಆಳವಾಗಿ ಅಧ್ಯಯನ ಮಾಡಿದಾಗ ಮಾತ್ರ ಇವೆಲ್ಲವೂ ಸಾಧ್ಯ ಎಂದರು.
ಇಂದಿನ ದಿನಗಳಲ್ಲಿ ಹೆಜ್ಜೆ ಹೆಜ್ಜೆಗೂ ಮೋಸ ವಂಚನೆ ನಡೆಯುತ್ತಿವೆ. 12ನೇ ಶತಮಾನದಲ್ಲಿ ಶರಣರಿಗೂ ಕೂಡಾ ಮೋಸವಾಗಿತ್ತು. ಈಗಲೂ ಸಮಾಜದಲ್ಲಿ ಅನ್ಯಾಯಗಳು ಮುಂದುವರಿಯುತ್ತಿವೆ. ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಹಡಪದ ಅಪ್ಪಣ್ಣನವರ ಜಯಂತಿಯನ್ನು ಜಯಂತಿಗೆ ಸೀಮಿತಗೊಳಿಸದೆ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಕಾಂತ ಕೊಟ್ರಶೆಟ್ಟಿ, ನಿಂಗಪ್ಪ ಅವಟಿ, ಮನ್ನಾನ ಶಾಬಾದಿ, ಸಂಜೀವ ಬಿರಾದಾರ, ಅರವಿಂದ ಗೊಳಸಂಗಿ, ಮಂಜುನಾಥ ಜಾಲಗೇರಿ, ಪ್ರಶಾಂತ ಮುಂಜಾನೆ, ಬಸನಗೌಡ ಪಾಟೀಲ, ಮಾಂತೇಶ ಹೆಬ್ಬಾಳ, ಮಲ್ಲು ಪಟ್ಟಣಶೆಟ್ಟಿ, ಅಣ್ಣಾರಾಯ ಪತಂಗಿ, ಬಸವರಾಜ ಅಳ್ಳಗಿ, ವೆಂಕಟೇಶ ಕರಾಡೆ, ಸಂತೋಷ ಚಿಂಚೋಳ್ಳಿ, ವೀರೇಶ ಗಬ್ಬೂರ, ಅರುಣ ಗೊಳಸಂಗಿ, ಮಹೇಶ ಪತ್ತಾರ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

