ಬಸವನಬಾಗೇವಾಡಿ: ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಮೀಸಲಾತಿ ಮಸೂದೆಯನ್ನು ಹಿಂದೆ ಪಡೆದಿರುವುದು ರಾಜ್ಯ ಸರ್ಕಾರದ ದೌರ್ಬಲ್ಯದ ಸಂಕೇತವಾಗಿದೆ. ಕನ್ನಡದ ಅಸ್ಮಿತೆ ಬಗ್ಗೆ ಮಾತನಾಡುವ ರಾಜ್ಯ ಸರ್ಕಾರ ಪಟ್ಟ ಭದ್ರತಾ ಶಕ್ತಿಗಳ ಒತ್ತಡದಿಂದಾಗಿ ತಾತ್ಕಾಲಿಕವಾಗಿ ಹಿಂದೆ ಪಡೆದಿರುವುದಾಗಿ ಹೇಳಿರುವುದು ದುರಂತದ ಸಂಗತಿ ಆಗಿದೆ. ಬೆಂಗಳೂರಿನಲ್ಲಿ ಈಗಾಗಲೇ ಅನ್ಯ ರಾಜ್ಯದ ಜನ ಹೆಚ್ಚಾಗತೊಡಗಿದ್ದರಿಂದ ಕನ್ನಡಿಗರೇ ಅಲ್ಪಸಂಖ್ಯಾತರಾಗಿದ್ದಾರೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸರೋಜಿನಿ ವರದಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಲೋಚಿಸಬೇಕು. ಮಾತೆತ್ತಿದರೆ ನುಡಿದಂತೆ ನಡೆಯುತ್ತೇವೆ ಎಂದು ಹೇಳುವ ಸರಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡು ಕನ್ನಡಿಗರಿಗೆ ನ್ಯಾಯ ಒದಗಿಸಬೇಕು. ಕನ್ನಡ ಅಶ್ಮಿತೆ ಬಗ್ಗೆ ಮಾತನಾಡುವ ಎಲ್ಲಾ ಪಕ್ಷದ ರಾಜಕಾರಣಿಗಳು, ಜನಪ್ರತಿನಿಧಿಗಳು ರಾಜ್ಯ ಸರ್ಕಾರಕ್ಕೆ ಕನ್ನಡಿಗರಿಗೆ ನ್ಯಾಯ ಸಿಗುವಂತಾಗಲು ಒತ್ತಾಯಿಸಬೇಕೆಂದು ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

