ವಿಜಯಪುರ: ಸಿಂದಗಿಯ ವಿವಿಧ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೋಮವಾರ ಭೇಟಿ ನೀಡಿ ತಾಲೂಕಾ ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.
ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಧಾರ ನೊಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.
ಸಿಂದಗಿ ಉಪನೊಂದಣಾಧಿಕಾರಿಗಳ ಕಚೇರಿ ಹಾಗೂ ಪುರಸಭೆ ಕಚೇರಿಗಳಿಗೆ ಭೇಟಿ ನೀಡಿ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸುಧಾರಣೆಗೆ ಸಲಹೆ-ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಸಿಂದಗಿ ತಾಲೂಕು ಕಚೇರಿಗಳಿಗೆ ಡಿಸಿ ಟಿ.ಭೂಬಾಲನ್ ಭೇಟಿ-ಪರಿಶೀಲನೆ
Related Posts
Add A Comment

