ವಿಜಯಪುರ: ಅಂತರ್‌ರಾಷ್ಟ್ರೀಯ ವಲಸೆ ಕೇಂದ್ರ-ಕರ್ನಾಟಕ ವತಿಯಿಂದ ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ:ಟ್ಯಾಲೆಂಟ್ ಆರೇಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್‌ಸಿ/ಜಿಎನ್‌ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗ ಕಲ್ಪಿಸಲು ಮುಂದಾಗಿದ್ದು, ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಆಸಕ್ತ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಉತ್ಸುಕರಾದ ಅಭ್ಯರ್ಥಿಗಳನ್ನು ಸಂಸ್ಥೆ ವತಿಯಿಂದ ಆಯ್ಕೆ ಮಾಡಿ ಅವರಿಗೆ ಕೇರಳ ರಾಜ್ಯದ ತಿರುವನಂತಪುರದ ತರಬೇತಿ ಕೇಂದ್ರದಲ್ಲಿ ೮ ತಿಂಗಳ ಕಾಲ ಜರ್ಮನ್ ಭಾಷೆ ಬಗ್ಗೆ ತರಬೇತಿ ನೀಡುತ್ತಿದ್ದು, ತರಬೇತಿಯೊಂದಿಗೆ ಊಟ ಮತ್ತು ಉಚಿತ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.
ನರ್ಸಿಂಗ್ ಪೂರ್ಣಗೊಳಿಸಿದ ಉದ್ಯೋಗಾಕಾಂಕ್ಷಿಗಳು ಕಾರ್ಮಿಕ ಅಧಿಕಾರಿಗಳ ಕಚೇರಿ, ಅಲ್ಲಾಪುರ ಓಣಿ, ಸಿಂದಗಿ ನಾಕಾ ಕಾರ್ಮಿಕ ಭವನ ವಿಜಯಪುರ ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೯೧೬೪೨೬೫೫೪೨ ಸಂಖ್ಯೆಗೆ ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ನಿಯೋಜನೆ :ತರಬೇತಿಗೆ ಅರ್ಜಿ ಆಹ್ವಾನ
Related Posts
Add A Comment
